News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಬಡ ಕೋವಿಡ್ ರೋಗಿಗಳಿಗೆ ಉಚಿತ ಚಿಕಿತ್ಸೆ ಮಧ್ಯಪ್ರದೇಶ ಸರ್ಕಾರ ನಿರ್ಧಾರ

ನವದೆಹಲಿ: ಬಡ ಕೋವಿಡ್ ರೋಗಿಗಳಿಗೆ ಉಚಿತ ಚಿಕಿತ್ಸೆ ನೀಡಲು ಮಧ್ಯಪ್ರದೇಶ ಸರ್ಕಾರ ಹೊಸ ಯೋಜನೆಯನ್ನು ಪ್ರಾರಂಭಿಸುತ್ತಿದೆ.  ಈ ಯೋಜನೆಯಡಿ ಗುತ್ತಿಗೆ ಪಡೆದ ಖಾಸಗಿ ಆಸ್ಪತ್ರೆಗಳಲ್ಲಿ ಮಧ್ಯಮ ವರ್ಗದವರು ಸೇರಿದಂತೆ ರಾಜ್ಯದ ಬಡ ಮತ್ತು ಸಾಮಾನ್ಯ ಜನರಿಗೆ ಕೋವಿಡ್-19  ಉಚಿತ ಚಿಕಿತ್ಸೆ ಪಡೆಯಲು ಸಾಧ್ಯವಾಗುತ್ತದೆ ಎಂದು ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾನ್ ಹೇಳಿದ್ದಾರೆ.

ಕೋವಿಡ್ ಚಿಕಿತ್ಸೆಗಾಗಿ ಸರ್ಕಾರವು ಖಾಸಗಿ ಆಸ್ಪತ್ರೆಗಳನ್ನು ಎಂಪಾನಲ್ ಮಾಡಲಿದೆ. ಸಿಟಿ ಸ್ಕ್ಯಾನ್, ಔಷಧಿಗಳು, ಚುಚ್ಚುಮದ್ದು, ಆಮ್ಲಜನಕ ಇತ್ಯಾದಿ ಪರೀಕ್ಷೆಗಳನ್ನು ಉಚಿತವಾಗಿ ಲಭ್ಯವಾಗುವಂತೆ ಮಾಡಲಾಗುತ್ತದೆ ಎಂದು ಸರ್ಕಾರ ಹೇಳಿದೆ.

ರಾಜ್ಯದ ಆಯುಷ್ಮಾನ್ ಭಾರತದ ಯೋಜನೆಯಡಿ ಈವರೆಗೆ 2 ಕೋಟಿ 42 ಲಕ್ಷ ಕಾರ್ಡ್‌ಗಳನ್ನು ಒದಗಿಸಲಾಗಿದ್ದು, ಇದರ ಅಡಿಯಲ್ಲಿ ಶೇಕಡಾ 88 ರಷ್ಟು ಜನಸಂಖ್ಯೆಯನ್ನು ಒಳಪಡಿಸಲಾಗಿದೆ. ಇವರೆಲ್ಲರೂ ಸರ್ಕಾರಿ ಗುತ್ತಿಗೆ ಪಡೆದ ಆಸ್ಪತ್ರೆಗಳಲ್ಲಿ ಕರೋನಾಗೆ ಉಚಿತ ಚಿಕಿತ್ಸೆ ಪಡೆಯಲು ಸಾಧ್ಯವಾಗಲಿದೆ. ಆಯುಷ್ಮಾನ್ ಭಾರತ್ ಯೋಜನೆಯಡಿ ತಮ್ಮ ಜಿಲ್ಲೆಯ ಖಾಸಗಿ ಆಸ್ಪತ್ರೆಗಳನ್ನು ತಾತ್ಕಾಲಿಕವಾಗಿ ಎಂಪಾನಲ್ ಮಾಡಲು ಜಿಲ್ಲಾಅಧಿಕಾರ ನೀಡಲಾಗಿದೆ. ಆಯುಷ್ಮಾನ್ ಭಾರತ್ ಪ್ಯಾಕೇಜ್ ದರವನ್ನು ಸರ್ಕಾರ ಶೇ 40 ರಷ್ಟು ಹೆಚ್ಚಿಸಿದೆ. ಈ ಯೋಜನೆಯಡಿ ಚಿಕಿತ್ಸೆ ಪಡೆಯುತ್ತಿರುವ ಪ್ರತಿಯೊಬ್ಬ ವ್ಯಕ್ತಿಗೆ ಡಯಗ್ನೊಸ್ಟಿಕ್ ಅಡ್ವಾನ್ಸ್ ಆಗಿ ರಾಜ್ಯ ಸರ್ಕಾರ 5000 ರೂ. ನೀಡಲಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top