News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಯುರೋಪಿಯನ್ ಕೌನ್ಸಿಲ್ ಸಭೆಯಲ್ಲಿ ವಿಶೇಷ ಆಹ್ವಾನಿತರಾಗಿ ಭಾಗಿಯಾಗಲಿದ್ದಾರೆ ಮೋದಿ

ನವದೆಹಲಿ:  ಇಂದು ನಡೆಯಲಿರುವ ಯುರೋಪಿಯನ್ ಕೌನ್ಸಿಲ್ ಸಭೆಯಲ್ಲಿ ವಿಶೇಷ ಆಹ್ವಾನಿತರಾಗಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಭಾರತ-ಇಯು ನಾಯಕರ ಸಭೆಯನ್ನು ಪೋರ್ಚುಗಲ್ ಪ್ರಧಾನಿ ಆಂಟೋನಿಯೊ ಕೋಸ್ಟಾ ಆಯೋಜಿಸಿದ್ದಾರೆ. ಪೋರ್ಚುಗಲ್ ಪ್ರಸ್ತುತ ಯುರೋಪಿಯನ್ ಒಕ್ಕೂಟದ ಕೌನ್ಸಿಲ್ ಅಧ್ಯಕ್ಷತೆಯನ್ನು ಹೊಂದಿದೆ.

ಎಲ್ಲಾ 27 ಇಯು ಸದಸ್ಯ ರಾಷ್ಟ್ರಗಳ ಮುಖ್ಯಸ್ಥರೊಂದಿಗೆ ಪ್ರಧಾನಿ ಮೋದಿ ಸಭೆಯಲ್ಲಿ ಭಾಗವಹಿಸಲಿದ್ದಾರೆ. ನಾಯಕರು ಕೋವಿಡ್-19 ಸಾಂಕ್ರಾಮಿಕ ಮತ್ತು ಆರೋಗ್ಯ ಸಹಕಾರದ ಕುರಿತು ಅಭಿಪ್ರಾಯಗಳನ್ನು ವಿನಿಮಯ ಮಾಡಿಕೊಳ್ಳಲಿದ್ದಾರೆ, ಸುಸ್ಥಿರ ಮತ್ತು ಅಂತರ್ಗತ ಬೆಳವಣಿಗೆಯನ್ನು ಉತ್ತೇಜಿಸಲಿದ್ದಾರೆ. ಭಾರತ-ಇಯು ಆರ್ಥಿಕ ಸಹಭಾಗಿತ್ವವನ್ನು ಬಲಪಡಿಸುವ ನಿಟ್ಟಿನಲ್ಲಿ ಚರ್ಚೆ ನಡೆಸಲಿದ್ದಾರೆ. ಪರಸ್ಪರ ಆಸಕ್ತಿಯ ಪ್ರಾದೇಶಿಕ ಮತ್ತು ಜಾಗತಿಕ ಸಮಸ್ಯೆಗಳ ಬಗ್ಗೆಯೂ ಚರ್ಚೆ ನಡೆಸಲಿದ್ದಾರೆ.

ಭಾರತ-ಇಯು ನಾಯಕರ ಸಭೆಯು ಇಯು ಸದಸ್ಯ ರಾಷ್ಟ್ರಗಳ ಎಲ್ಲಾ ನಾಯಕರೊಂದಿಗೆ ಚರ್ಚಿಸಲು ಅಭೂತಪೂರ್ವ ಅವಕಾಶವಾಗಿದೆ .

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top