ಬೆಂಗಳೂರು: ಕೊರೋನಾ ಸೋಂಕಿನ ಸೌಮ್ಯ ಲಕ್ಷಣಗಳಿಗೆ ತುತ್ತಾಗಿ ಹೋಂ ಐಸೋಲೇಶನ್ಗೆ ಒಳಗಾಗಿರುವವರಿಗೆ ವೈದ್ಯಕೀಯ ಕಿಟ್ಗಳನ್ನು ಒದಗಿಸುವ ಮಹತ್ವದ ಕಾರ್ಯಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ.
ಈಗಾಗಲೇ ಬೆಂಗಳೂರು ನಗರದ ಆಯ್ದ ಪ್ರದೇಶಗಳಲ್ಲಿ ಈ ಸೇವೆಯನ್ನು ರಾಜ್ಯ ಸರ್ಕಾರ ಆರಂಭ ಮಾಡಿದೆ. ಶೀಘ್ರದಲ್ಲೇ ಇದನ್ನು ಸಂಪೂರ್ಣ ರಾಜ್ಯದಲ್ಲಿ ಅಳವಡಿಸಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.
ಹೆಚ್ಚುತ್ತಿರುವ ಕೊರೋನಾ ಪ್ರಕರಣಗಳ ಹಿನ್ನೆಲೆಯಲ್ಲಿ ಹೋಂ ಐಸೋಲೇಶನ್ಗೆ ಒಳಗಾದವರಿಗೆ ಶೀಘ್ರ ಗುಣಮುಖರಾಗಲು ಅಗತ್ಯವಾದ ವೈದ್ಯಕೀಯ ಕಿಟ್ಗಳನ್ನು ಉಚಿತವಾಗಿ ಒದಗಿಸಲಿದೆ. ಆಸ್ಪತ್ರೆಗಳಿಗೆ ದಾಖಲಾಗದ ರೋಗಿಗಳ ಆರೋಗ್ಯ ಹಿತದೃಷ್ಟಿಯಿಂದ ರಾಜ್ಯ ಸರ್ಕಾರ ಈ ಮಹತ್ವದ ಕ್ರಮಕ್ಕೆ ಮುಂದಾಗಿದೆ. ಅವರ ಆರೋಗ್ಯ ತಪಾಸಣೆಗೆ ಸಂಬಂಧಿಸಿದಂತೆ ಸರ್ಕಾರ ತಜ್ಞರು, ವೈದ್ಯರ ಸಲಹೆಗಳನ್ನು ಸಹ ಪಡೆದುಕೊಂಡಿದ್ದು, ಅವರು ಸೂಚಿಸಿದನ್ವಯ ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಎಂದು ಮೂಲಗಳು ಹೇಳಿವೆ.
ಈ ಸಂಬಂಧ ಸರ್ಕಾರದ ಮುಖ್ಯ ಕಾರ್ಯದರ್ಶಿ ಪಿ ರವಿಕುಮಾರ್ ಮಾತನಾಡಿದ್ದು, ಈ ವ್ಯವಸ್ಥೆ ಜಾರಿಗೊಳಿಸುವ ನಿಟ್ಟಿನಲ್ಲಿ ಸರ್ಕಾರ ಹೆಚ್ಚು ಆಸ್ಥೆ ವಹಿಸಿದ್ದು, ಇದರಲ್ಲಿ ಯಾವುದೇ ರೀತಿಯ ಸಂಪನ್ಮೂಲಗಳ ಕೊರತೆಯಾಗದಂತೆ ಎಚ್ಚರಿಕೆ ತೆಗೆದುಕೊಳ್ಳಲಾಗಿದೆ. ಇದಕ್ಕಾಗಿ ಆರ್ಥಿಕ ಸಹಕಾರವನ್ನು ಸಹ ಇಲಾಖೆಗಳಿಂದ ಪಡೆಯಲಾಗಿದೆ. ಜೊತೆಗೆ ವೈದ್ಯಕೀಯ ಕಿಟ್ಗೆ ಅಗತ್ಯ ವಸ್ತುಗಳಿಗೂ ಆದೇಶ ನೀಡಲಾಗಿದೆ ಎಂದು ಹೇಳಿದ್ದಾರೆ.
ಆದೇಶಿಸಲಾದ ಸಾಮಗ್ರಿಗಳು ಬಂದ ತಕ್ಷಣದಲ್ಲೇ ರಾಜ್ಯಾದ್ಯಂತ ಈ ಯೋಜನೆ ವಿಸ್ತರಣೆ ಮಾಡಲಾಗುತ್ತದೆ. ಕೊರೋನಾ ಕೈಪಿಡಿಗಳು, ಔಷಧಗಳು ಈ ಕಿಟ್ನಲ್ಲಿರಲಿವೆ. ಆಕ್ಸಿಮೀಟರ್ಗಳನ್ನು, ಥರ್ಮಾ ಮೀಟರ್ಗಳನ್ನು ಸಹ ಈ ಕಿಟ್ನಲ್ಲಿ ನೀಡಲು ಸರ್ಕಾರ ಚಿಂತನೆ ನಡೆಸುತ್ತಿದೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.