ಬೆಂಗಳೂರು: ರಾಜ್ಯದ ಎಲ್ಲಾ ಜಿಲ್ಲೆ ಹಾಗೂ ತಾಲೂಕು ಆಸ್ಪತ್ರೆಗಳ ವಾರ್ಡ್ ಮತ್ತು ಐಸಿಯುಗಳಲ್ಲಿ ಸಿಸಿಟಿವಿ ಅಳವಡಿಸುವ ಸಂಬಂಧ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸೇವೆಗಳ ಆಯುಕ್ತಾಲಯ ಸುತ್ತೋಲೆ ಹೊರಡಿಸಿದೆ.
ಈ ಸಂಬಂಧ 11 ಮೇ 2021 ರ ಒಳಗಾಗಿ ಎಲ್ಲಾ ಜಿಲ್ಲಾ, ತಾಲೂಕು ಆಸ್ಪತ್ರೆಗಳ ವಾರ್ಡ್ಗಳಲ್ಲಿ ಸಿಸಿಟಿವಿ ಅಳವಡಿಸುವಂತೆ ಆಸ್ಪತ್ರೆಗಳ ನಿರ್ದೇಶಕರು, ವೈದ್ಯಕೀಯ ಮಹಾ ವಿದ್ಯಾಲಯ, ಜಿಲ್ಲಾ ಶಸ್ತ್ರಚಿಕಿತ್ಸಕರು, ಆಡಳಿತ ವೈದ್ಯಾಧಿಕಾರಿಗಳಿಗೆ ಆಯುಕ್ತಾಲಯ ಸೂಚನೆ ನೀಡಿದೆ. ಜೊತೆಗೆ ಸಿಸಿ ಟಿವಿಗೆ ಸಂಬಂಧಿಸಿದಂತೆ ತಾಂತ್ರಿಕ ವೈಶಿಷ್ಟ್ಯಗಳ ವಿವಿರವನ್ನೂ ಈ ಸುತ್ತೋಲೆಯ ಜೊತೆಗೆ ನೀಡಲಾಗಿದೆ.
ಇನ್ನು ಸಿಸಿಟಿವಿ ಅಳವಡಿಸಲು ತಗುಲುವ ವೆಚ್ಚವನ್ನು ಆರೋಗ್ಯ ರಕ್ಷಾ ಸಮಿತಿ ಅನುದಾನದಿಂದ ಅಥವಾ ಆಸ್ಪತ್ರೆಯ ಲಭ್ಯವಿರುವ ಇತರ ಅನುದಾನಗಳಿಂದ ಬಳಸಿಕೊಳ್ಳುವಂತೆ ಸೂಚಿಸಲಾಗಿದೆ. ಹಾಗೆಯೇ ಈ ವ್ಯವಸ್ಥೆಗಳ ಬಗ್ಗೆ ಸದರಿ ಜಿಲ್ಲೆಗಳ ಆರೋಗ್ಯಾಧಿಕಾರಿಗಳು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಪರಿಶೀಲಿಸಿ 12 ಮೇ 2021 ರೊಳಗಾಗಿ ವರದಿ ಸಲ್ಲಿಸುವಂತೆ ಆಯುಕ್ತಾಲಯ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.