News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಹಿಂಸಾಚಾರ: ಸ್ಪೀಕರ್ ಚುನಾವಣೆ ಬಹಿಷ್ಕರಿಸಲು ಪಶ್ಚಿಮಬಂಗಾಳ ಬಿಜೆಪಿ ನಿರ್ಧಾರ

ನವದೆಹಲಿ: ಪಶ್ಚಿಮ ಬಂಗಾಳ ವಿಧಾನಸಭೆಯಲ್ಲಿ ಶನಿವಾರ ನಡೆಯಲಿರುವ ಸ್ಪೀಕರ್ ಚುನಾವಣೆಯನ್ನು ಬಹಿಷ್ಕರಿಸಲು ಬಿಜೆಪಿ ನಿರ್ಧರಿಸಿದೆ ಮತ್ತು ಚುನಾವಣಾ ಫಲಿತಾಂಶದ ನಂತರ ನಡೆದ ಹಿಂಸಾಚಾರವನ್ನು ನಿಲ್ಲಿಸುವವರೆಗೂ ತನ್ನ ಶಾಸಕರು ಸದನಕ್ಕೆ ಹಾಜರಾಗುವುದಿಲ್ಲ ಎಂದು ಬಿಜೆಪಿ ಹೇಳಿದೆ.

ಸುದ್ದಿಗಾರರೊಂದಿಗೆ ಮಾತನಾಡಿದ ಪಶ್ಚಿಮ ಬಂಗಾಳ ಬಿಜೆಪಿ ಅಧ್ಯಕ್ಷ ದಿಲೀಪ್ ಘೋಷ್, “ನಾವು ನಾಳೆ ಸ್ಪೀಕರ್ ಚುನಾವಣೆಗೆ ಹಾಜರಾಗುವುದಿಲ್ಲ. ನಮ್ಮ ಶಾಸಕರು ಕೂಡ ಅಧಿವೇಶನಕ್ಕೆ ಹಾಜರಾಗುವುದಿಲ್ಲ. ನಮ್ಮ ಶಾಸಕರಿಗೆ ಸಂಪೂರ್ಣ ರಕ್ಷಣೆ ಸಿಗುವವರೆಗೂ ನಾವು ವಿಧಾನಸಭೆಗೆ ಬರುವುದಿಲ್ಲ. ರಾಜ್ಯದಲ್ಲಿ ಫಲಿತಾಂಶದ ನಂತರ ನಡೆದ ಹಿಂಸಾಚಾರವನ್ನು ನಿಯಂತ್ರಿಸಿದ ಬಳಿಕ ಮಾತ್ರ ನಾವು ಬರುತ್ತೇವೆ. ಹಿಂಸೆ ತಡೆಯಲು ಸರ್ಕಾರ ಕ್ರಮ ಕೈಗೊಳ್ಳುತ್ತದೆ ಎಂದು ನಾವು ನಿರೀಕ್ಷಿಸುತ್ತೇವೆ” ಎಂದಿದ್ದಾರೆ.

ಪಶ್ಚಿಮಬಂಗಾಳದಲ್ಲಿ ಚುನಾವಣಾ ಫಲಿತಾಂಶ ಘೋಷಣೆಯಾದ ಬಳಿಕ ದೊಡ್ಡ ಮಟ್ಟದಲ್ಲಿ ಹಿಂಸಾಚಾರ ಭುಗಿಲೆದ್ದಿತ್ತು, ಟಿಎಂಸಿ ಗೂಂಡಾಗಳು ಬಿಜೆಪಿ ಕಾರ್ಯಕರ್ತರ ಮೇಲೆ ಹಲ್ಲೆ ನಡೆಸಿದ್ದಾರೆ, ಇದರಿಂದಾಗಿ ಅನೇಕರು ಪ್ರಾಣ ತೆತ್ತಿದ್ದಾರೆ. ಅನೇಕ ಬಿಜೆಪಿಗರು ಬೇರೆ ರಾಜ್ಯಗಳಿಗೆ ಪಲಾಯನ ಮಾಡಿದ್ದಾರೆ ಎನ್ನಲಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top