News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ತುರ್ತು ಬಳಕೆಗೆ ಅನುಮೋದನೆ ಪಡೆದ DRDO ಅಭಿವೃದ್ಧಿಪಡಿಸಿದ ಆ್ಯಂಟಿ ಕೋವಿಡ್‌ ಔಷಧ

ನವದೆಹಲಿ: ವೈದ್ಯಕೀಯ ಆಮ್ಲಜನಕ ಮತ್ತು ಹಾಸಿಗೆಗಳ ಕೊರತೆಯನ್ನು ನೀಗಿಸುವ  ನಿಟ್ಟಿನಲ್ಲಿ ಸರ್ಕಾರ ಸರ್ವ ಪ್ರಯತ್ನಗಳನ್ನು ನಡೆಸುತ್ತಿದೆ.   ಕೋವಿಡ್ -19 ರೋಗಿಗಳಿಗೆ ತುರ್ತು ಬಳಕೆಗಾಗಿ ಡ್ರಗ್ಸ್ ಕಂಟ್ರೋಲರ್ ಜನರಲ್ ಆಫ್ ಇಂಡಿಯಾ (ಡಿಸಿಜಿಐ) ಆ್ಯಂಟಿ ಕೋವಿಡ್ -19 ಔಷಧಿಯೊಂದನ್ನು ಅನುಮೋದಿಸಿದೆ.

ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್‌ಡಿಒ)ದ ಲ್ಯಾಬ್‌ ಇನ್‌ಸ್ಟಿಟ್ಯೂಟ್ ಆಫ್ ನ್ಯೂಕ್ಲಿಯರ್ ಮೆಡಿಸಿನ್ ಆಂಡ್ ಅಲೈಡ್ ಸೈನ್ಸಸ್ (ಐಎನ್‌ಎಂಎಎಸ್) ಹೈದರಾಬಾದ್‌ನ ಡಾ. ರೆಡ್ಡೀಸ್ ಲ್ಯಾಬೊರೇಟರೀಸ್ (ಡಿಆರ್‌ಎಲ್) ಸಹಯೋಗದೊಂದಿಗೆ ಅಭಿವೃದ್ಧಿಪಡಿಸಿದ 2-ಡಿಯೋಕ್ಸಿ-ಡಿ-ಗ್ಲೂಕೋಸ್ (2-ಡಿಜಿ) ಔಷಧದ ತುರ್ತು ಬಳಕೆಗೆ ಅನುಮೋದನೆ ನೀಡಲಾಗಿದೆ.

ಈ ಔಷಧವು ಕ್ಲಿನಿಕಲ್ ಪ್ರಾಯೋಗಗಳಲ್ಲಿ ಮಹತ್ವದ ಫಲಿತಾಂಶಗಳನ್ನು ತೋರಿಸಿದೆ ಎಂದು ಮೂಲಗಳು ತಿಳಿಸಿವೆ.

ಈ ಔಷಧ ಆಸ್ಪತ್ರೆಗೆ ದಾಖಲಾದ ಕೋವಿಡ್ ರೋಗಿಗಳಿಗೆ ವೇಗವಾಗಿ ಚೇತರಿಸಿಕೊಳ್ಳಲು ಇದು ಸಹಾಯ ಮಾಡುತ್ತದೆ ಮತ್ತು ಅವರಿಗೆ ಪೂರಕ ಆಮ್ಲಜನಕದ ಅವಲಂಬನೆಯನ್ನು ಕಡಿಮೆ ಮಾಡುತ್ತದೆ ಎಂದು ತೋರಿಸಿದೆ. ಕೋವಿಡ್-19 ನಿಂದ ಬಳಲುತ್ತಿರುವ ಜನರಿಗೆ ಈ ಔಷಧವು ಅಪಾರ ಪ್ರಯೋಜನವನ್ನು ನೀಡುತ್ತದೆ ಎಂಬುದು ಸಾಬೀತಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top