News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಇದುವರೆಗೆ 3,400 ಟನ್ ದ್ರವ ವೈದ್ಯಕೀಯ ಆಮ್ಲಜನಕವನ್ನು ದೇಶಾದ್ಯಂತ ತಲುಪಿಸಿದೆ ರೈಲ್ವೆ

ನವದೆಹಲಿ: ರೈಲ್ವೆ ಸುಮಾರು 3,400 ಟನ್ ದ್ರವ ವೈದ್ಯಕೀಯ ಆಮ್ಲಜನಕವನ್ನು ದೇಶದ ವಿವಿಧ ರಾಜ್ಯಗಳಿಗೆ ತಲುಪಿಸಿದೆ ಎಂದು ರೈಲ್ವೆ ಸಚಿವಾಲಯ ತಿಳಿಸಿದೆ. 54 ಆಕ್ಸಿಜನ್ ಎಕ್ಸ್‌ಪ್ರೆಸ್‌ಗಳು ಈವರೆಗೆ ತಮ್ಮ ಪ್ರಯಾಣವನ್ನು ಪೂರ್ಣಗೊಳಿಸಿವೆ.

ರೈಲ್ವೆ ವಿವಿಧ ರಾಜ್ಯಗಳಿಗೆ ಆಮ್ಲಜನಕವನ್ನು ತಲುಪಿಸುವ ಮೂಲಕ ಕೋವಿಡ್‌ ರೋಗಿಗಳಿಗೆ ನಿರಾಳತೆ ಒದಗಿಸುವ ಪ್ರಯಾಣವನ್ನು ಮುಂದುವರಿಸಿದೆ ಎಂದು ಅದು ಹೇಳಿದೆ. ಪ್ರಸ್ತುತ 26 ಟ್ಯಾಂಕರ್‌ಗಳು 417 ಟನ್ ದ್ರವ ವೈದ್ಯಕೀಯ ಆಮ್ಲಜನಕವನ್ನು ಹೊಂದಿದ್ದು, ಇದನ್ನು ಹೊತ್ತು ರೈಲುಗಳು ಮಹಾರಾಷ್ಟ್ರ, ಉತ್ತರ ಪ್ರದೇಶ, ಹರಿಯಾಣ ಮತ್ತು ದೆಹಲಿಗೆ ಆಗಮಿಸುವ ನಿರೀಕ್ಷೆಯಿದೆ.

ರೈಲ್ವೆ ಇದುವರೆಗೆ 230 ಟನ್ ದ್ರವ ವೈದ್ಯಕೀಯ ಆಮ್ಲಜನಕವನ್ನು ಮಹಾರಾಷ್ಟ್ರಕ್ಕೆ, 968 ಟನ್ ಉತ್ತರ ಪ್ರದೇಶಕ್ಕೆ, 249 ಟನ್ ಮಧ್ಯಪ್ರದೇಶಕ್ಕೆ, ಒಂದು ಸಾವಿರ 427 ಟನ್ ದೆಹಲಿಗೆ, 355 ಟನ್ ಹರಿಯಾಣಕ್ಕೆ, 123 ಟನ್ ತೆಲಂಗಾಣಕ್ಕೆ ಮತ್ತು 40 ಟನ್ ಅನ್ನು ರಾಜಸ್ಥಾನಕ್ಕೆ ತಲುಪಿಸಿದೆ ಎಂದು ಸಚಿವಾಲಯ ತಿಳಿಸಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top