ಬೆಂಗಳೂರು: ಕೊರೋನಾ ಸೋಂಕಿನ ಈ ಕಠಿಣ ಸಂದರ್ಭದಲ್ಲಿ ಜನರಲ್ಲಿ ಆತ್ಮಸ್ಥೈರ್ಯ ಮೂಡಿಸುವ ನಿಟ್ಟಿನಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘ ಮೇ 11 ರಿಂದ ತೊಡಗಿದಂತೆ 5 ದಿನಗಳ ಸರಣಿ ಕಾರ್ಯಕ್ರಮ ‘ಪಾಸಿಟಿವಿಟಿ ಅನ್ಲಿಮಿಟೆಡ್’ ಆಯೋಜಿಸಿದೆ.
ಈ ಸರಣಿ ಉಪನ್ಯಾಸ ಕಾರ್ಯಕ್ರಮದಲ್ಲಿ RSS ಮುಖ್ಯಸ್ಥ ಮೋಹನ್ ಭಾಗವತ್, ವಿಪ್ರೋದ ಗ್ರೂಪ್ ಫೌಂಡರ್ ಅಜೀಂ ಪ್ರೇಮ್ಜಿ, ಇನ್ಛೋಸಿಸ್ ಫೌಂಡೇಶನ್ ಅಧ್ಯಕ್ಷೆ ಸುಧಾ ಮೂರ್ತಿ ಅವರು ಭಾಗವಹಿಸಲಿದ್ದು, ಜನರಿಗೆ ಕೊರೋನಾ ಸಂಕಷ್ಟ ಕಾಲದಲ್ಲಿ ಹೇಗೆ ಆತ್ಮಸ್ಥೈರ್ಯ ಹೆಚ್ಚಿಸಿಕೊಳ್ಳುವುದು, ಕೊರೋನಾ ಗೆಲ್ಲುವ ಬಗೆ ಹೇಗೆ ಮೊದಲಾದವುಗಳ ಬಗ್ಗೆ ತಿಳಿಸಿ ಕೊಡಲಿದ್ದಾರೆ.
ಸಿಐಐ, ಎಫ್ಐಸಿಸಿಐ, ಇನ್ಸ್ಟಿಟ್ಯೂಟ್ ಆಫ್ ಚಾರ್ಟಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ, ಆಧ್ಯಾತ್ಮಿಕ ಸಂಸ್ಥೆಗಳ ಸಹಯೋಗದೊಂದಿಗೆ RSS ಈ ಸರಣಿ ಉಪನ್ಯಾಸ ಕಾರ್ಯಕ್ರಮ ನಡೆಸಲಿದೆ. ಇದರಲ್ಲಿ ಮೋಹನ್ ಭಾಗವತ್, ಅಜೀಂ ಪ್ರೇಮ್ಜಿ, ಸುಧಾ ಮೂರ್ತಿ ಜೊತೆಗೆ ಆರ್ಟ್ ಆಫ್ ಲಿವಿಂಗ್ನ ಶ್ರೀ ರವಿಶಂಕರ್ ಗುರೂಜಿ, ಇಶಾ ಫೌಂಡೇಶನ್ನ ಸದ್ಗುರು ಜಗ್ಗಿ ವಾಸುದೇವ್ ಮೊದಲಾದವರು ಜನಸಾಮಾನ್ಯರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.