ನವದೆಹಲಿ: ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಗ್ರಾಮೀಣ ಸ್ಥಳೀಯ ಸಂಸ್ಥೆಗಳಿಗೆ (ಆರ್‌ಎಲ್‌ಬಿ) ಅನುದಾನ ನೀಡಲು 25 ರಾಜ್ಯಗಳಿಗೆ 8,923.8 ಕೋಟಿ ರೂ ಬಿಡುಗಡೆ ಮಾಡಿದೆ. ಪಂಚಾಯತಿ ರಾಜ್ ಸಂಸ್ಥೆಗಳಾದ ಗ್ರಾಮ, ಬ್ಲಾಕ್ ಮತ್ತು ಜಿಲ್ಲೆ ಈ ಮೂರು ಶ್ರೇಣಿಗಳಿಗೆ ಈ ಅನುದಾನ ದೊರಕಲಿದೆ.
ಶನಿವಾರ ಬಿಡುಗಡೆಯಾದ ಮೊತ್ತವು 2021-22ನೇ ಸಾಲಿನ ‘ಅನ್ಟೈಡ್ ಗ್ರಾಂಟ್’ಗಳ ಮೊದಲ ಕಂತು. ಕೋವಿಡ್-19 ಸಾಂಕ್ರಾಮಿಕ ರೋಗವನ್ನು ಎದುರಿಸಲು ಅಗತ್ಯವಾದ ವಿವಿಧ ತಡೆಗಟ್ಟುವಿಕೆ ಕ್ರಮಗಳಿಗಾಗಿ ಇದನ್ನು ಗ್ರಾಮೀಣ ಸ್ಥಳೀಯ ಸಂಸ್ಥೆಗಳು ಬಳಸಿಕೊಳ್ಳಬಹುದು. ಹೀಗಾಗಿ, ಸಾಂಕ್ರಾಮಿಕ ರೋಗದ ವಿರುದ್ಧ ಹೋರಾಡಲು ಇದು ಮೂರು ಹಂತದ ಪಂಚಾಯತ್‌ಗಳಿಗೆ ಸಂಪನ್ಮೂಲಗಳನ್ನು ಹೆಚ್ಚಿಸುತ್ತದೆ.
15 ನೇ ಹಣಕಾಸು ಆಯೋಗದ ಶಿಫಾರಸುಗಳ ಪ್ರಕಾರ, 2021 ರ ಜೂನ್ ತಿಂಗಳಲ್ಲಿ ಮೊದಲ ಕಂತನ್ನು ರಾಜ್ಯಗಳಿಗೆ ಬಿಡುಗಡೆ ಮಾಡಬೇಕಾಗಿತ್ತು. ಆದರೆ, ಕೋವಿಡ್-19 ಸಾಂಕ್ರಾಮಿಕ ಪರಿಸ್ಥಿತಿಯ ದೃಷ್ಟಿಯಿಂದ ಮತ್ತು ಸಚಿವಾಲಯದ ಶಿಫಾರಸಿನ ಮೇರೆಗೆ ಅನುದಾನವನ್ನು ಸಾಮಾನ್ಯ ವೇಳಾಪಟ್ಟಿಯ ಮುಂಚಿತವಾಗಿ ಬಿಡುಗಡೆ ಮಾಡಲು ಹಣಕಾಸು ಸಚಿವಾಲಯವು ನಿರ್ಧರಿಸಿದೆ.
✅Centre releases Rs. 8923.8 crore to Panchayats in 25 States
✅Release of grant advanced in view of COVID-19 pandemic
Read More➡️ https://t.co/tnBYurqdaG(1/4) pic.twitter.com/XIBdeliFua
— Ministry of Finance (@FinMinIndia) May 9, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.