ಭೋಪಾಲ್: ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರು ಭೋಪಾಲ್ನಲ್ಲಿ 1000 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ಅನ್ನು ಸಾರ್ವಜನಿಕರಿಗೆ ಅರ್ಪಿಸಿದ್ದಾರೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್ಎಸ್ಎಸ್) ಎರಡನೇ ಸರಸಂಘಚಾಲಕ ಮಾಧವರಾವ್ ಸದಾಶಿವರಾವ್ ಗೋಲ್ವಳ್ಕರ್ ಅವರ ಹೆಸರಿನ ಈ ಕೇಂದ್ರದಲ್ಲಿ 25 ಆಮ್ಲಜನಕ ಸಾಂದ್ರಕಗಳ ವ್ಯವಸ್ಥೆ ಇದೆ. 200 ವೈದ್ಯರು ಮತ್ತು ಅರೆವೈದ್ಯರ ಸೇವೆ ಲಭ್ಯವಿದೆ.
“ಮಾಧವ್ ಸೇವಾ ಕೇಂದ್ರವು ಕರೋನಾ ಬಿಕ್ಕಟ್ಟಿನ ಸಂದರ್ಭದಲ್ಲಿ ರೋಗಿಗಳಿಗೆ ಸೇವೆ ಸಲ್ಲಿಸಲಿದೆ. ಈ ಕೇಂದ್ರವು ಬಿಕ್ಕಟ್ಟಿನ ಸಮಯದಲ್ಲಿ ಸೇವೆ ಸಲ್ಲಿಸಲು ಮುಂದೆ ಬರುವ ಸಮಾಜದ ಶಕ್ತಿಯ ಸಂಕೇತವಾಗಿದೆ. ಪ್ರಧಾನಿ ನರೇಂದ್ರ ಮೋದಿ ಮತ್ತು ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರ ಮಾರ್ಗದರ್ಶನದಲ್ಲಿ, ಸಾರ್ವಜನಿಕರಿಗೆ ಸೇವೆ ಸಲ್ಲಿಸಲು ಇಡೀ ದೇಶದಲ್ಲಿ ಬೃಹತ್ ಕೆಲಸಗಳು ನಡೆಯುತ್ತಿವೆ. ಸಾಂಕ್ರಾಮಿಕ ರೋಗವನ್ನು ನಿಯಂತ್ರಿಸಲು ರಾಜ್ಯ ಸರ್ಕಾರವೂ ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡುತ್ತಿದೆ. ಮಧ್ಯಪ್ರದೇಶ ಗೆಲ್ಲುತ್ತದೆ, ಕೊರೋನಾ ಸೋಲುತ್ತದೆ” ಎಂದು ಈ ಸಂದರ್ಭದಲ್ಲಿ ಚೌಹಾಣ್ ಹೇಳಿದ್ದಾರೆ.
ಕೋವಿಡ್ ಕೇರ್ ಸೌಲಭ್ಯದ ಉದ್ಘಾಟನೆಯ ಸಂದರ್ಭದಲ್ಲಿ ಕೇಂದ್ರ ಪೆಟ್ರೋಲಿಯಂ ಸಚಿವ ಧರ್ಮೇಂದ್ರ ಪ್ರಧಾನ್ ಮತ್ತು ಬಿಜೆಪಿ ಮಧ್ಯಪ್ರದೇಶ ಮುಖ್ಯಸ್ಥ ವಿಷ್ಣು ದತ್ ಶರ್ಮಾ ಉಪಸ್ಥಿತರಿದ್ದರು. ಐಸೋಲೇಷನ್ಗೆ ಸ್ಥಳವಿಲ್ಲದ ರೋಗಿಗಳಿಗೆ ಮತ್ತು ಚಿಕಿತ್ಸೆಯ ಸಮಯದಲ್ಲಿ ಆಮ್ಲಜನಕದ ಬೆಂಬಲ ಅಗತ್ಯವಿರುವ ಸೌಮ್ಯ ಮತ್ತು ಮಧ್ಯಮ ಗುಣಲಕ್ಷಣದ ಕೋವಿಡ್ ರೋಗಿಗಳಿಗೆ ಈ ಕೇಂದ್ರದಲ್ಲಿ ಸೇವೆ ಸಿಗಲಿದೆ.
“ಸೇವಾ ಹಿ ಸಂಘಟನ್” ಅಭಿಯಾನದಡಿಯಲ್ಲಿ ಪಕ್ಷದ ಅಧ್ಯಕ್ಷ ನಡ್ಡಾ ಜಿ ಅವರು ನೀಡಿದ ಕರೆಗೆ ಅನುಗುಣವಾಗಿ ರಾಜ್ಯಾದ್ಯಂತ ಬಿಜೆಪಿ ಕಾರ್ಯಕರ್ತರು ಸಾರ್ವಜನಿಕರಿಗೆ ಸೇವೆ ಸಲ್ಲಿಸುತ್ತಿದ್ದಾರೆ. 1000 ಹಾಸಿಗೆಗಳ ಕೇಂದ್ರ ಸ್ಥಾಪಿಸಲು ಆರ್ಎಸ್ಎಸ್ ಸೇರಿದಂತೆ ಹಲವಾರು ಸಾಮಾಜಿಕ ಕಾರ್ಯಕರ್ತರು ಮತ್ತು ಸ್ವಯಂಸೇವಾ ಸಂಸ್ಥೆಗಳು ಬಿಜೆಪಿ ಜಿಲ್ಲಾ ಘಟಕಕ್ಕೆ ಬೆಂಬಲ ನೀಡಿದ್ದಾರೆ. ಕೋವಿಡ್ ಪ್ರಸರಣ ಸರಪಳಿಯನ್ನು ಮುರಿಯಲು ಇದು ನಿಜವಾಗಿಯೂ ಶ್ಲಾಘನೀಯ ಕಾರ್ಯ” ಎಂದು ಶರ್ಮಾ ಹೇಳಿದ್ದಾರೆ.
ಕೇಂದ್ರದಲ್ಲಿ ರೋಗಿಗಳಿಗೆ ಒದಗಿಸಲಾಗುತ್ತಿರುವ ಸೌಲಭ್ಯಗಳ ಬಗ್ಗೆ ಬಿಜೆಪಿ ಜಿಲ್ಲಾಧ್ಯಕ್ಷ ಸುಮಿತ್ ಪಚೌರಿ ಮಾಹಿತಿ ನೀಡಿದ್ದು, ರೋಗಿಗಳಿಗೆ ಚಿಕಿತ್ಸೆ ನೀಡಲು ಮತ್ತು ಆಡಳಿತಾತ್ಮಕ ನೆರವು ನೀಡಲು ಜಿಲ್ಲಾಡಳಿತವು ಆಸ್ಪತ್ರೆ ಸಿಬ್ಬಂದಿಯೊಂದಿಗೆ ಸಮನ್ವಯ ಸಾಧಿಸಲಿದೆ. ಇಲ್ಲಿ 35 ರಿಂದ 50 ಹಾಸಿಗೆಗಳ ಸಾಮರ್ಥ್ಯವಿರುವ 22 ವಾರ್ಡ್ಗಳಿವೆ. ಪುರುಷ ಮತ್ತು ಮಹಿಳಾ ರೋಗಿಗಳಿಗೆ ಪ್ರತ್ಯೇಕ ಶೌಚಾಲಯ ಮತ್ತು ಸ್ನಾನಗೃಹಗಳನ್ನು ಹೊಂದಿರುವ ಪ್ರತ್ಯೇಕ ವಾರ್ಡ್ಗಳನ್ನು ಸಿದ್ಧಪಡಿಸಲಾಗಿದೆ. ಈ ವಾರ್ಡ್ಗಳಿಗೆ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಮಹಾತ್ಮ ಗಾಂಧಿ, ಅಬ್ದುಲ್ ಕಲಾಂ, ಸುಭಾಷ್ ಚಂದ್ರ ಬೋಸ್, ಮಂಗಲ್ ಪಾಂಡೆ, ರಾಜಾ ಭೋಜ್ ಮತ್ತು ಸರ್ದಾರ್ ಪಟೇಲ್ ಅವರ ಶ್ರೇಷ್ಠ ವ್ಯಕ್ತಿಗಳ ಹೆಸರಿಡಲಾಗಿದೆ.
ಹಾಸಿಗೆಯ ಹೊರತಾಗಿ ರೋಗಿಗೆ ಟೇಬಲ್, ನೀರು ಬಿಸಿಮಾಡಲು ಮತ್ತು ಮೊಬೈಲ್ ಚಾರ್ಜ್ ಮಾಡಲು ಸೌಲಭ್ಯ ನೀಡಲಾಗುವುದು ಎಂದು ಪಚೌರಿ ಹೇಳಿದ್ದಾರೆ.
ಕೆಲವು ಹಾಸಿಗೆಗಳು ತುರ್ತು ಪರಿಸ್ಥಿತಿಗಳಿಗೆ ಆಮ್ಲಜನಕ ಕಾನ್ಸನ್ಟ್ರೇಟರ್ಸ್ ಅನ್ನು ಹೊಂದಿರುತ್ತವೆ. ರೋಗಿಗಳಿಗೆ ಕೇಂದ್ರದಲ್ಲಿ ಔಷಧಿ, ತಿಂಡಿ ಮತ್ತು ಎರಡು ಬಾರಿ ಊಟವನ್ನೂ ನೀಡಲಾಗುತ್ತದೆ ಎಂದಿದ್ದಾರೆ.
“ಕ್ವಾರಂಟೈನ್ ಕೇಂದ್ರವು ಎರಡೂ ಬದಿಯಲ್ಲಿ ಧನ್ವಂತರಿ ಯೋಗ ಕೊಠಡಿಗಳನ್ನು ಹೊಂದಿರುತ್ತದೆ. ಬೆಳಿಗ್ಗೆ ಮತ್ತು ಸಂಜೆ ಯೋಗವನ್ನು ಇಲ್ಲಿ ನಡೆಸಲಾಗುತ್ತದೆ. ರಾಮಾಯಣ ಮತ್ತು ಮಹಾಭಾರತದ ಇಂತಹ ಧಾರಾವಾಹಿಗಳ ಮೂಲಕ ರೋಗಿಗಳನ್ನು ರಂಜಿಸಲು ಎರಡು ಎಲ್ಇಡಿ ಪರದೆಗಳು ಮತ್ತು ಧ್ವನಿ ವ್ಯವಸ್ಥೆಗಳನ್ನು ಸಹ ಇಲ್ಲಿ ಸ್ಥಾಪಿಸಲಾಗಿದೆ. ದೇಶಭಕ್ತಿಯ ಚಲನಚಿತ್ರಗಳನ್ನು ಪ್ರಸಾರ ಮಾಡಲಾಗುತ್ತದೆ. ಗಾಯತ್ರಿ ಮತ್ತು ಮಹಾಮೃತ್ಯುಂಜಯ ಮಂತ್ರವನ್ನು ಧ್ವನಿಮುದ್ರಣ ಮಾಡಿ ಕೇಳಿಸಲಾಗುತ್ತದೆ” ಎಂದು ಪಚೌರಿ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.