ಬೆಂಗಳೂರು: ಎಲ್ಲರ ಸಹಕಾರದ ಹೊರತಾಗಿ ಕಠಿಣ ನಿಯಮಗಳು ಯಶಸ್ವಿಯಾಗುವುದು ಅಸಾಧ್ಯ. ಈ ನಿಟ್ಟಿನಲ್ಲಿ ಯಾವುದೇ ರೀತಿಯ ಅಡೆತಡೆ, ಸಮಸ್ಯೆಗಳಿದ್ದಲ್ಲಿ ಜಿಲ್ಲಾಧಿಕಾರಿಗಳು, ಜಿಲ್ಲಾ ಉಸ್ತುವಾರಿಗಳು, ಅಥವಾ ನೇರವಾಗಿ ನನ್ನದೇ ಗಮನಕ್ಕೆ ತನ್ನಿ ಎಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.
ಕೊರೋನಾ ಸೋಂಕು ನಿಯಂತ್ರಣಕ್ಕೆ ಒಗ್ಗಟ್ಟಿನ ಹೋರಾಟ ಅಗತ್ಯ. ಈ ನಿಟ್ಟಿನಲ್ಲಿ ಸರ್ಕಾರದ ಜೊತೆಗೆ ಸಾರ್ವಜನಿಕರು ಸಹ ಕೈಜೋಡಿಸಬೇಕಿದೆ ಎಂದು ಅವರು ಮನವಿ ಮಾಡಿದ್ದಾರೆ.
ಕೊರೋನಾ ಸೋಂಕಿನ ಸರಪಳಿಯನ್ನು ಮುರಿಯುವ ನಿಟ್ಟಿನಲ್ಲಿ ಇಂದಿನಿಂದ ರಾಜ್ಯದಲ್ಲಿ ಮತ್ತಷ್ಟು ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗಿದೆ. ಇದರ ಯಶಸ್ಸಿಗೆ ಎಲ್ಲಾ ಸಂಸದರು, ಶಾಸಕರು ತಮ್ಮ ತಮ್ಮ ಕ್ಷೇತ್ರದಲ್ಲಿಯೇ ಉಳಿದುಕೊಂಡು ಉದ್ದೇಶ ಈಡೇರುವ ನಿಟ್ಟಿನಲ್ಲಿ ಕಟ್ಟುನಿಟ್ಟಿನ ನಿಯಮಗಳು ಜಾರಿಯಲ್ಲಿರುವುದನ್ನು ಖಚಿತಪಡಿಸಬೇಕು ಎಂದು ತಿಳಿಸಿದ್ದಾರೆ.
As we begin the 14-day strict restriction to break the chain of infection, I request all citizens to follow the guidelines in letter and spirit. Your cooperation is crucial to contain the spread of the virus. Together we can defeat the pandemic.
— B.S.Yediyurappa (@BSYBJP) May 10, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.