ಗುವಾಹಟಿ: ಹಿಮಂತ ಬಿಸ್ವಾ ಶರ್ಮಾ ಅಸ್ಸಾಂನ 15 ನೇ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಸ್ಸಾಂನ ಎರಡನೇ ಬಿಜೆಪಿ ಸಿಎಂ ಎಂಬ ಹೆಗ್ಗಳಿಕೆಯೂ ಅವರದ್ದು. ಸರ್ಬಾನಂದ ಸೋನೊವಾಲ್ ಅವರು ಈವರೆಗೆ ಅಲ್ಲಿನ ಸಿಎಂ ಆಗಿದ್ದರು.
ಅಸ್ಸಾಂ ಬಿಜೆಪಿ ಶಾಸಕಾಂಗ ಪಕ್ಷದ ನಾಯಕರಾಗಿ ಸರ್ವಾನುಮತದಿಂದ ಆಯ್ಕೆಯಾದ ಒಂದು ದಿನದ ನಂತರ ಶರ್ಮಾ ಅವರು ಅಸ್ಸಾಂನ ಹೊಸ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಸ್ಸಾಂ ಗವರ್ನರ್ ಜಗದೀಶ್ ಮುಖಿ ಅವರು ಪ್ರಮಾಣವಚನ ಬೋಧಿಸಿದರು. ಶರ್ಮಾ ಅಸ್ಸಾಂ ರಾಜ್ಯದ 15 ನೇ ಮುಖ್ಯಮಂತ್ರಿಯಾಗಿದ್ದಾರೆ.
ಬಿಜೆಪಿಯ ಹೊಸದಾಗಿ ಚುನಾಯಿತರಾದ 13 ಶಾಸಕರು ಮತ್ತು ಅದರ ಮೈತ್ರಿ ಅಸೋಮ್ ಗಣ ಪರಿಷತ್ (ಎಜಿಪಿ) ಮತ್ತು ಯುನೈಟೆಡ್ ಪೀಪಲ್ ಪಾರ್ಟಿ ಲಿಬರಲ್ (ಯುಪಿಪಿಎಲ್)ನ 13 ಶಾಸಕರು ಪ್ರಮಾಣ ವಚನ ಸ್ವೀಕರಿಸಿದರು.
ಅಸ್ಸಾಂನ ಎರಡನೇ ಬಿಜೆಪಿ ಮುಖ್ಯಮಂತ್ರಿ ಶರ್ಮಾ ಅವರ ಪ್ರಮಾಣವಚನ ಸಮಾರಂಭದಲ್ಲಿ ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಉಪಸ್ಥಿತರಿದ್ದರು.
ಟ್ವೀಟ್ ಮೂಲಕ ಅಭಿನಂದಿಸಿರುವ ಪ್ರಧಾನಿ ಮೋದಿ, ʼಹಿಮಾಂತ ಬಿಸ್ವಾ ಮತ್ತು ಪ್ರಮಾಣ ವಚನ ಸ್ವೀಕರಿಸಿದ ಇತರ ಸಚಿವರಿಗೆ ಅಭಿನಂದನೆಗಳು. ಈ ತಂಡವು ಅಸ್ಸಾಂನ ಅಭಿವೃದ್ಧಿಯ ಪಯಣಕ್ಕೆ ವೇಗವನ್ನು ನೀಡುತ್ತದೆ ಮತ್ತು ಜನರ ಆಕಾಂಕ್ಷೆಗಳನ್ನು ಈಡೇರಿಸುತ್ತದೆ ಎಂಬ ವಿಶ್ವಾಸ ನನಗಿದೆʼ ಎಂದಿದ್ದಾರೆ.
Congratulations to @himantabiswa Ji and the other Ministers who took oath today. I am confident this team will add momentum to the development journey of Assam and fulfil aspirations of the people.
— Narendra Modi (@narendramodi) May 10, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.