ಬೆಂಗಳೂರು: ಕೊರೋನಾ ಪ್ರಕರಣಗಳು ಹೆಚ್ಚಾಗುತ್ತಿರುವುದಕ್ಕೆ ಸಂಬಂಧಿಸಿದಂತೆ ಅತೀ ಹೆಚ್ಚು ಸೋಂಕಿತರನ್ನು ಹೊಂದಿರುವ ರಾಜ್ಯಗಳ ಮುಖ್ಯಮಂತ್ರಿಗಳ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ದೂರವಾಣಿ ಸಮಾಲೋಚನೆ ನಡೆಸಿದರು.
ಈ ಸಂಬಂಧ ಕರ್ನಾಟಕ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಜೊತೆಗೂ ಮಾಹಿತಿ ಪ್ರಧಾನಿ ಮೋದಿ ಪ್ರಸ್ತುತ ಸ್ಥಿತಿಗತಿಗಳ ಬಗ್ಗೆ ಅಗತ್ಯ ಮಾಹಿತಿ ಪಡೆದುಕೊಂಡಿದ್ದಾರೆ.
ಈ ಸಂದರ್ಭದಲ್ಲಿ ರಾಜ್ಯದಲ್ಲಿ ಕೊರೋನಾ ಸೋಂಕಿತರಿಗೆ ನೀಡಲು ಅಗತ್ಯವಿರುವ ರೆಮ್ಡೆಸಿವಿರ್ ಮತ್ತು ಆಮ್ಲಜನಕ ಕೊರತೆಯ ಬಗೆಗೂ ಮುಖ್ಯಮಂತ್ರಿಗಳು ಪ್ರಧಾನಿ ನರೇಂದ್ರ ಮೋದಿ ಅವರ ಗಮನಕ್ಕೆ ತಂದಿದ್ದಾರೆ. ಹಾಗೆಯೇ ಹೆಚ್ಚುತ್ತಿರುವ ಸೋಂಕು, ಸಾವಿನ ಪ್ರಮಾಣ ಮೊದಲಾದ ವಿಚಾರಗಳ ಬಗೆಗೂ ಅವರಿಗೆ ವರದಿ ನೀಡಿದ್ದಾರೆ. ರಾಜ್ಯಕ್ಕೆ ರೆಮ್ಡೆಸಿವಿರ್, ಆಮ್ಲಜನಕ ಪೂರೈಕೆ ಹೆಚ್ಚಿಸುವಂತೆಯೂ ಅವರು ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.