ರಾಂಚಿ: ಕರ್ನಾಟಕದ ಬೆಂಗಳೂರಿನತ್ತ ರಾಂಚಿಯ ಟಾಟಾನಗರದಿಂದ ದ್ರವೀಕೃತ ಆಕ್ಸಿಜನ್ ಕಂಟೇನರ್ಗಳನ್ನು ಹೊತ್ತ ಆಕ್ಸಿಜನ್ ಎಕ್ಸ್ಪ್ರೆಸ್ ರೈಲುಗಳು ಪ್ರಯಾಣ ಆರಂಭಿಸಿರುವುದಾಗಿ ಕೇಂದ್ರ ಸಚಿವ ಪೀಯುಷ್ ಗೋಯಲ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಕೊರೋನಾ ಸೋಂಕಿತರ ಚಿಕಿತ್ಸೆಗೆ ಅನುಕೂಲವಾಗುವಂತೆ ಈ ಆಕ್ಸಿಜನ್ ಕಂಟೈನರ್ಗಳನ್ನು ಪೂರೈಕೆ ಮಾಡಲಾಗುತ್ತಿದೆ. ಇದೇ ಮೊದಲ ಬಾರಿಗೆ ರಾಜ್ಯಕ್ಕೆ ಕೇಂದ್ರ ಸರ್ಕಾರ ಆಕ್ಸಿಜನ್ ಎಕ್ಸ್ಪ್ರೆಸ್ ಮುಖೇನ ಆಮ್ಲಜನಕ ಪೂರೈಕೆ ಮಾಡುತ್ತಿದೆ. ಒಟ್ಟು 6 ಕಂಟೈನರ್ಗಳಲ್ಲಿ ಆಮ್ಲಜನಕ ರಾಜ್ಯಕ್ಕೆ ಬರುತ್ತಿದೆ. ಇದರಿಂದಾಗಿ ರಾಜ್ಯದಲ್ಲಿ ಸೋಂಕಿತರ ಚಿಕಿತ್ಸೆಗೆ ಹೆಚ್ಚು ಅನುಕೂಲವಾಗಲಿದೆ ಎಂದು ಪೀಯುಷ್ ತಿಳಿಸಿದ್ದಾರೆ.
ರಾಜ್ಯದಲ್ಲಿ ಕೊರೋನಾ ಸೋಂಕು ಹೆಚ್ಚಾಗಿದ್ದು ನಿಯಂತ್ರಣಕ್ಕಾಗಿ ಹಲವು ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ಇಂದಿನಿಂದ ಲಾಕ್ಡನ್ ಸಹ ಜಾರಿಗೊಳಿಸಲಾಗಿದೆ.
#OxygenExpress is on its way from Tatanagar to Bengaluru with 6 containers of medical Oxygen.
The first Oxygen Express train to Karnataka will deliver oxygen for bringing relief to COVID-19 patients in the State. pic.twitter.com/bf64L3jSFx
— Piyush Goyal (@PiyushGoyal) May 10, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.