ನವದೆಹಲಿ: ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಅದಾಗಲೇ 1 ಕೋಟಿ ಡೋಸ್ ಕೊರೋನಾ ಲಸಿಕೆಗಳಿದ್ದು, ಮುಂದಿನ ಮೂರು ದಿನಗಳಲ್ಲಿ ಹೆಚ್ಚುವರಿ 9 ಲಕ್ಷಕ್ಕೂ ಅಧಿಕ ಡೋಸ್ ಗಳನ್ನು ಒದಗಿಸಲಾಗುತ್ತದೆ ಎಂದು ಕೇಂದ್ರ ಆರೋಗ್ಯ ಸಚಿವಾಲಯ ತಿಳಿಸಿದೆ.
ಈ ವರೆಗೆ ದೇಶದ ಎಲ್ಲಾ ರಾಜ್ಯಗಳು, ಕೇಂದ್ರಾಡಳಿತ ಪ್ರದೇಶಗಳಿಗೆ ಸುಮಾರು18 ಕೋಟಿ ಲಸಿಕೆಗಳನ್ನು ನೀಡಲಾಗಿದೆ. ಇದರಲ್ಲಿ ಹಲವು ಡೋಸ್ಗಳು ವ್ಯರ್ಥವಾಗಿರುವುದಾಗಿಯೂ ಆರೋಗ್ಯ ಸಚಿವಾಲಯದ ಮೂಲಗಳು ತಿಳಿಸಿವೆ.
ಅದಾಗ್ಯೂ ಕೇಂದ್ರಾಡಳಿತ ಪ್ರದೇಶಗಳು ಮತ್ತು ರಾಜ್ಯಗಳಲ್ಲಿ ಸುಮಾರು 1 ಕೋಟಿಗೂ ಅಧಿಕ ಲಸಿಕೆಗಳು ಇನ್ನೂ ಲಭ್ಯವಿವೆ. ಮುಂದಿನ ಮೂರು ದಿನಗಳೊಳಗಾಗಿ ಹೆಚ್ಚಿನ ಲಸಿಕೆ ಒದಗಿಸುವ ಜೊತೆಗೆ ಸಾಂಕ್ರಾಮಿಕ ರೋಗದ ವಿರುದ್ಧ ಪರಿಣಾಮಕಾರಿ ಹೋರಾಟ ನಡೆಸಲಾಗುತ್ತದೆ. ಟೆಸ್ಟ್, ಟ್ರ್ಯಾಕ್, ಟ್ರೀಟ್, ಸಾಂಕ್ರಾಮಿಕ ರೋಗದ ನಿಯಂತ್ರಣ ಮತ್ತು ನಿರ್ವಹಣೆ ಸೋಂಕಿನ ವಿರುದ್ಧ ಹೋರಾಟ ನಡೆಸಲು ಇರುವ ಪ್ರಮುಖ 5 ಅಂಶಗಳಾಗಿವೆ ಎಂದು ಸಚಿವಾಲಯ ಅಭಿಪ್ರಾಯ ವ್ಯಕ್ತಪಡಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.