ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಪ್ರಕರಣ ದಿನೇ ದಿನೇ ಹೆಚ್ಚುತ್ತಲೇ ಇದ್ದು, ಈ ಹಿನ್ನೆಲೆಯಲ್ಲಿ ತೀವ್ರ ಪ್ರಮಾಣದ ಸಮಸ್ಯೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹೊಸ ಮಾರ್ಗಸೂಚಿ ಪ್ರಕಟಿಸಿದೆ.
ಸೋಂಕು ಉಲ್ಬಣವಾಗುತ್ತಿರುವ ಸಂದರ್ಭದಲ್ಲಿ ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸುವ, ಸ್ಥಳಾಂತರ, ಬಿಡುಗಡೆ ಮೊದಲಾದವುಗಳಿಗೆ ಸಂಬಂಧಿಸಿದಂತೆ ಈ ಮಾರ್ಗಸೂಚಿ ಇದೆ. ಸೋಂಕಿತರ ಚಿಕಿತ್ಸೆಗೆ ಹಾಸಿಗೆಗಳ ಅವಶ್ಯಕತೆ ತುಂಬಾ ಇದ್ದು, ಕೊರೋನಾ ತೀವ್ರ ತರದ ಪರಿಣಾಮಗಳನ್ನು ಎದುರಿಸುವವರಿಗೆ ಹಾಸಿಗೆ ಸಿಗದೆ ಪರದಾಡುವ ಸ್ಥಿತಿ ನಿರ್ಮಾಣವಾಗಿದೆ. ಈ ಹಿನ್ನೆಲೆಯಲ್ಲಿ ಇಂತಹ ಸಮಸ್ಯೆ ತಡೆಯಲು ಪೂರಕವಾಗುವಂತಹ ಮಾರ್ಗಸೂಚಿ ಹೊರಡಿಸಲಾಗಿದೆ.
ಈ ಮಾರ್ಗಸೂಚಿಯನ್ವಯ ಕೊರೋನಾ ಚಿಕಿತ್ಸೆಗಾಗಿ ದಾಖಲಾದ ರೋಗಿಗಳ ಆರೋಗ್ಯ ಸ್ಥಿತಿ ಉತ್ತಮವಾದ ಕೂಡಲೇ ಅವರನ್ನು ಆಸ್ಪತ್ರೆಗಳಿಂದ ಬಿಡುಗಡೆ ಮಾಡಿ ತಾತ್ಕಾಲಿಕ ಆಸ್ಪತ್ರೆ, ಕೋವಿಡ್ ಆರೈಕೆ ಕೇಂದ್ರಗಳಿಗೆ ದಾಖಲಿಸುವಂತೆ ಸೂಚಿಸಲಾಗಿದೆ. ಹಾಗೆಯೇ ರಾಜ್ಯ ಸರ್ಕಾರದ ಆದೇಶಕ್ಕೆ ಅನುಗುಣವಾಗಿಯೇ ಡಿಸ್ಚಾರ್ಜ್ ಪ್ರಕ್ರಿಯೆಗಳನ್ನು ನಡೆಸುವಂತೆಯೂ ಸೂಚಿಸಲಾಗಿದೆ. ಕೇವಲ ಸರ್ಕಾರಿ ಆಸ್ಪತ್ರೆಗಳು ಮಾತ್ರವಲ್ಲದೆ ,ಶಿಫಾರಸ್ಸು ಪಡೆದ ಆಸ್ಪತ್ರೆಗಳು ಸಹ ಈ ಆಜ್ಞೆ ಪಾಲಿಸುವಂತೆ ಇಲಾಖೆ ಮಾರ್ಗಸೂಚಿಯಲ್ಲಿ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.