ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಚಿಕಿತ್ಸೆಗೆ ಅಗತ್ಯವಾದ ಆಮ್ಲಜನಕ, ರೆಮ್ಡೆಸಿವಿರ್ ಜೊತೆಗೆ ಖಾಸಗಿ ಆಸ್ಪತ್ರೆಗಳಲ್ಲಿರುವ ಹಾಸಿಗೆಗಳ ಮಾಹಿತಿಯನ್ನು ಸುವರ್ಣ ಆರೋಗ್ಯ ಸುರಕ್ಷತಾ ಟ್ರಸ್ಟ್ ಪೋರ್ಟಲ್ನಲ್ಲಿ ಸಿಗುವಂತೆ ಮಾಡಲಾಗುವುದು ಎಂದು ಉಪಮುಖ್ಯಮಂತ್ರಿ ಡಾ ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ.
ಆಮ್ಲಜನಕ ಮತ್ತು ರೆಮ್ಡೆಸಿವಿರ್ ಬೇಡಿಕೆ, ಪೂರೈಕೆ, ಬಳಕೆ ಮೊದಲಾದ ವಿಷಯಗಳಿಗೆ ಸಂಬಂಧಿಸಿದಂತೆ ಸಮಗ್ರ ಮಾಹಿತಿಯನ್ನು ಈ ಪೋರ್ಟಲ್ ಮೂಲಕ ಅಪ್ಲೋಡ್ ಮಾಡಲಾಗುತ್ತದೆ. ಇದರೊಂದಿಗೆ ಸರ್ಕಾರಿ ಆಸ್ಪತ್ರೆಗಳ ಜೊತೆಗೆ, ಖಾಸಗಿ ಆಸ್ಪತ್ರೆಗಳಲ್ಲಿನ ಬೆಡ್ಗಳ ಕುರಿತು ಸಮಗ್ರ ಮಾಹಿತಿ ನೀಡಲಾಗುತ್ತದೆ. ಇದನ್ನು ಸಹ ಈ ಪೋರ್ಟಲ್ ಮೂಲಕವೇ ಅಪ್ಲೋಡ್ ಮಾಡಲಾಗುತ್ತಿದ್ದು ಆ ಮೂಲಕ ಸಂಪೂರ್ಣ ಪಾರದರ್ಶಕತ್ವ ತರಲಾಗುತ್ತದೆ ಎಂದು ಹೇಳಿದ್ದಾರೆ.
ಮುಂದಿನ ಎರಡು ಮೂರು ದಿನಗಳಲ್ಲಿ http://arogya.karnataka.gov.in/ ನಲ್ಲಿ ಔಷಧ, ಚಿಕಿತ್ಸೆ, ಬೆಡ್ ಸೇರಿದಂತೆ ಇತರೆಲ್ಲಾ ಮಾಹಿತಿಗಳನ್ನು ಅಪ್ಲೋಡ್ ಮಾಡಲಾಗುತ್ತದೆ. ಈ ಸಂಬಂಧ ಅಧಿಕಾರಿಗಳಿಗೂ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ ಎಂದು ಡಿಸಿಎಂ ತಿಳಿಸಿದ್ದಾರೆ. ಹಾಗೆಯೇ ಇವುಗಳಲ್ಲಿ ಅಕ್ರಮ ಎಸಗಿದವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆಯನ್ನು ಅವರು ನೀಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.