ಬೆಂಗಳೂರು: ಮುಂದಿನ 5 ವರ್ಷದೊಳಗಾಗಿ ನಮ್ಮ ಮೆಟ್ರೋ ಯೋಜನೆಯ ಹಂತ 2ಎ ಮತ್ತು ಹಂತ 2ಬಿ ಯಡಿ ಕಾಮಗಾರಿಯನ್ನು ಸಂಪೂರ್ಣಗೊಳಿಸಿ ಮೆಟ್ರೋ ರೈಲು ಸಂಚಾರ ಆರಂಭ ಮಾಡಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಬಿಎಂಆರ್ಸಿಎಲ್ ಗೆ ಸೂಚಿಸಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು, ಕಾಮಗಾರಿ ಪೂರ್ಣಗೊಳಿಸಲು ಅಗತ್ಯ ಸಿದ್ಧತೆಗಳನ್ನು ಮಾಡಿಕೊಂಡು ತ್ವರಿತಗತಿಯಲ್ಲಿ ಮುಗಿಸುವಂತೆಯೂ ಸೂಚಿಸಿದ್ದಾರೆ. 2025 ರ ಜೂನ್ ವೇಳೆಗೆ ಮೆಟ್ರೋ ಕಾಮಗಾರಿ ಮತ್ತು ಹೊರವರ್ತುಲ ರಸ್ತೆ, 2025 ಸೆಪ್ಟೆಂಬರ್ ವೇಳೆಗೆ ವಿಮಾನ ನಿಲ್ದಾಣ ರಸ್ತೆ ಕಾಮಗಾರಿ ಪೂರ್ಣವಾಗಬೇಕು ಎಂದು ತಿಳಿಸಿದ್ದಾರೆ.
ಸರ್ಕಾರ 2019 ನೇ ವರ್ಷದಲ್ಲಿ ಈ ಯೋಜನೆಯ ಆರಂಭಕ್ಕೆ ಅನುಮೋದನೆ ನೀಡಿದೆ. ಇದು ಹೊರವರ್ತುಲ ರಸ್ತೆ, ಸಿಲ್ಕ್ ಬೋರ್ಡ್ – ಹೆಬ್ಬಾಳದ ನಡುವಿನ ಐಟಿ ಕೈಗಾರಿಕೆ ಮತ್ತು ವಿಮಾನ ನಿಲ್ದಾಣ ಪ್ರಯಾಣಿಕರಿಗೆ ಸೇವೆ ಒದಗಿಸಲಿದೆ. ಸರ್ಕಾರವು 14788 ಕೋಟಿ ರೂ. ವೆಚ್ಚದಲ್ಲಿ ಈ ಯೋಜನೆಗೆ ಅನುಮೋದನೆ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.