ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಲೇ ಇದ್ದು, ಸೋಂಕಿತರು ಆಕ್ಸಿಜನ್ಗಾಗಿ ಪರದಾಡುವಂತಾಗಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಸ್ವಯಂಸೇವಾ ಸಂಸ್ಥೆಗಳ ಸಹಭಾಗಿತ್ವದಲ್ಲಿ ರಾಜ್ಯದ ಸರ್ಕಾರಿ ಸಾರಿಗೆ ಬಿಎಂಟಿಸಿ ಪ್ರಾಯೋಗಿಕವಾಗಿ ಮೊಬೈಲ್ ಆಕ್ಸಿಜನ್ ಘಟಕವನ್ನು ಆರಂಭಿಸಲು ಮುಂದಾಗಿದೆ ಎಂದು ಡಿಸಿಎಂ ಲಕ್ಷ್ಮಣ್ ಸವದಿ ತಿಳಿಸಿದ್ದಾರೆ.
ಪ್ರಸ್ತುತ ಹೆಚ್ಚಿನ ಆಸ್ಪತ್ರೆಗಳಲ್ಲಿ ಕೊರೋನಾ ಸೋಂಕಿತರ ದಟ್ಟಣೆ ಅಧಿಕವಾಗಿದೆ. ಇದರಿಂದಾಗಿ ರೋಗಿಗಳ ಚಿಕಿತ್ಸೆಗೆ ಆಗತ್ಯವಿರುವ ಆಕ್ಸಿಜನ್ ಪೂರೈಕೆ ವಿಳಂಬವಾಗುತ್ತಿದೆ. ಈ ತೊಂದರೆಯನ್ನು ತಪ್ಪಿಸುವ ಸಲುವಾಗಿ ಬಸ್ಸುಗಳಲ್ಲಿಯೇ ತುರ್ತು ಆಕ್ಸಿಜನ್ ಅಗತ್ಯತೆಯನ್ನು ಪೂರೈಕೆ ಮಾಡುವ ನಿಟ್ಟಿನಲ್ಲಿ ಈ ಕ್ರಮಕ್ಕೆ ಸರ್ಕಾರ ಮುಂದಾಗಿದೆ ಎಂದು ಅವರು ತಿಳಿಸಿದ್ದಾರೆ.
ಈ ವಿಶೇಷ ಬಸ್ಸುಗಳನ್ನು ಸರ್ಕಾರಿ ಆಸ್ಪತ್ರೆಗಳಾದ ಕೆ ಸಿ ಜನರಲ್ ಆಸ್ಪತ್ರೆ ಅಥವಾ ವಿಕ್ಟೋರಿಯಾ ಆಸ್ಪತ್ರೆಯ ಆವರಣದಲ್ಲಿ ನಿಲ್ಲಿಸಲಾಗುವುದು. ಅಗತ್ಯ ಸಂದರ್ಭದಲ್ಲಿ ರೋಗಿಗಳಿಗೆ ಈ ಬಸ್ನಲ್ಲಿಯೇ ಆಕ್ಸಿಜನ್ ನೀಡುವುದಕ್ಕೆ ಪೂರಕವಾಗುವಂತಹ ಅನುಕೂಲಗಳನ್ನು ಕಲ್ಪಿಸಲಾಗಿದೆ. ಪ್ರಸ್ತುತ ಪ್ರಾಯೋಗಿಕವಾಗಿ 1 ಬಸ್ಸಿನಲ್ಲಿ ಈ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಸವದಿ ನುಡಿದಿದ್ದಾರೆ.
ಇನ್ನು ಈ ಸಂಬಂಧ ಎಲ್ಲಾ ವ್ಯವಸ್ಥೆಗಳನ್ನು ಫೌಂಡೇಶನ್ ಇಂಡಿಯಾ ಎಂಬ ಸ್ವಯಂಸೇವಾ ಸಂಸ್ಥೆ ಮಾಡಿಕೊಡುತ್ತಿದೆ. ಇದರಲ್ಲಿ ಏಕಕಾಲಕ್ಕೆ ಆರು ಜನರಿಗೆ ಆಕ್ಸಿಜನ್ ನೀಡಬಹುದಾಗಿದೆ. ಕೊರೋನಾದಿಂದ ಆಕ್ಸಿಜನ್ ಅಗತ್ಯತೆ ಇರುವ ರೋಗಿಗಳಿಗೆ ಇದು ಸಂಜೀವಿನಿ ಆಗಬಲ್ಲದು ಎಂದು ಸವದಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.