ಬೆಂಗಳೂರು: ಆಕ್ಸಿಜನ್ ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ HFNO ಬದಲು ವೆಂಟಿಲೇಟರ್ ಅಳವಡಿಸಲಾಗುತ್ತದೆ ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.
ಮಧ್ಯಮ ಪ್ರಮಾಣದಲ್ಲಿ ಕೊರೋನಾ ಲಕ್ಷಣ ಹೊಂದಿರುವ ಸೋಂಕಿತರಿಗೆ ನಿಮಿಷಕ್ಕೆ 20 – 60 ಲೀ. ಆಮ್ಲಜನಕ ಬೇಕಾಗುತ್ತದೆ. ಆಮ್ಲಜನಕ ಕೊರತೆ ಇರುವುದರಿಂದ ಪರ್ಯಾಯ ಕ್ರಮಗಳತ್ತ ಚಿತ್ತ ಹರಿಸಬೇಕಿದೆ. ಈ ಹಿನ್ನೆಲೆಯಲ್ಲಿ ಎಚ್ಎಫ್ಎನ್ಒಗಿಂತ ಪರಿಣಾಮಕಾರಿ ಎನ್ಐವಿ (ವೆಂಟಿಲೇಟರ್) ಅಳವಡಿಕೆಗೆ ಕ್ರಮ ಕೈಗೊಳ್ಳಲಾಗುತ್ತದೆ. ಇದರಿಂದ ಆಕ್ಸಿಜನ್ ಬೇಡಿಕೆ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಅವರು ತಿಳಿಸಿದ್ದಾರೆ.
ಕಳೆದ ಕೆಲ ತಿಂಗಳುಗಳ ಪ್ರಯತ್ನದಿಂದ ಪ್ರತಿ ತಾಲೂಕು ಆಸ್ಪತ್ರೆಗಳಲ್ಲಿ 50 ಆಕ್ಸಿಜನ್ ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ. ಕೆಲ ಆಸ್ಪತ್ರೆಯಲ್ಲಿ ತಜ್ಞರು ಇರದ ಹಿನ್ನೆಲೆಯಲ್ಲಿ ಆಕ್ಸಿಜನ್ ಮಾತ್ರ ಬಳಕೆ ಮಾಡಲಾಗುತ್ತಿದೆ. ಈ ಸಮಸ್ಯೆ ಪರಿಹಾರಕ್ಕೆ ವೈದ್ಯರನ್ನು ತಾತ್ಕಾಲಿಕ ನೆಲೆಯಲ್ಲಿ ನಿಯೋಜಿಸಲು ಚಿಂತಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.