ಬೆಂಗಳೂರು: ಬ್ಲ್ಯಾಕ್ ಫಂಗಸ್ ಕುರಿತು ಸಂಪೂರ್ಣ ಅಧ್ಯಯನ ನಡೆಸಿ ಮುಂದಿನ ಎರಡು ದಿನಗಳೊಳಗಾಗಿ ಸರ್ಕಾರಕ್ಕೆ ವರದಿ ಸಲ್ಲಿಸುವಂತೆ ಕೊರೋನಾ ತಾಂತ್ರಿಕ ಸಮಿತಿಗೆ ಸೂಚಿಸಲಾಗಿದ್ದು, ವರದಿ ಬಂದ ಬಳಿಕವಷ್ಟೇ ಚಿಕಿತ್ಸಾ ವಿಧಾನದ ಬಗ್ಗೆ ತಿಳಿಸಲಾಗುತ್ತದೆ ಎಂದು ಡಾ ಕೆ ಸುಧಾಕರ್ ತಿಳಿಸಿದ್ದಾರೆ.
ರಾಜ್ಯದ ಕೆಲವು ಕಡೆಗಳಲ್ಲಿ ಕೊರೋನಾ ನಂತರದಲ್ಲಿ ಬ್ಲ್ಯಾಕ್ ಫಂಗಸ್ ಪತ್ತೆಯಾಗಿದೆ. ಈ ಸಂಬಂಧ ತಜ್ಞರು ಅಧ್ಯಯನ ನಡೆಸಿ ವರದಿ ಸಲ್ಲಿಸಿದ ಬಳಿಕ ಸರ್ಕಾರ ಅಗತ್ಯ ಕ್ರಮ ಕೈಗೊಳ್ಳಲಿರುವುದಾಗಿ ತಿಳಿಸಿದೆ. ಮುಂದಿನ ಎರಡು ದಿನಗಳಲ್ಲಿ ಈ ಸಂಬಂಧ ಸರ್ಕಾರ ನಿರ್ಣಯ ತೆಗೆದುಕೊಳ್ಳಲಿದೆ ಎಂದು ಸಚಿವರು ಹೇಳಿದ್ದಾರೆ.
ನಗರ ಪ್ರದೇಶಗಳಲ್ಲಿ ಕೊರೋನಾ ಸೋಂಕು ಹೆಚ್ಚುತ್ತಿರುವುದು ಕಂಡುಬಂದಿದೆ. ಈ ಹಿನ್ನೆಲೆಯಲ್ಲಿ ಎಲ್ಲಾ ಜಿಲ್ಲಾ, ತಾಲೂಕಿನ ಆಸ್ಪತ್ರೆಗಳಲ್ಲಿ ಚಿಕಿತ್ಸಾ ಸೌಲಭ್ಯಗಳನ್ನು ಹೆಚ್ಚಿಸಲಾಗುತ್ತಿದೆ. ಕೊರೋನಾ ಕೇರ್ ಸೆಂಟರ್ಗಳು, ಸ್ಟೆಪ್ಡೌನ್ ಆಸ್ಪತ್ರೆಗಳನ್ನು ಆರಂಭಿಸಲು ಕ್ರಮ ಕೈಗೊಳ್ಳಲು ಈಗಾಗಲೇ ಹಲವು ಸುತ್ತಿನ ಸಭೆ ನಡೆಸಿರುವುದಾಗಿಯೂ ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.