News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮೊದಲ ಕೋವಿಡ್‌ ಅಲೆಗಿಂತ ಈಗ ಆಮ್ಲಜನಕ ಪೂರೈಕೆ 3 ಪಟ್ಟು ಹೆಚ್ಚಾಗಿದೆ: ಪಿಎಂಒ

ನವದೆಹಲಿ: ಕೋವಿಡ್ ಬಿಕ್ಕಟ್ಟನ್ನು ನಿಭಾಯಿಸುವಲ್ಲಿ ಆಮ್ಲಜನಕ ಮತ್ತು ಔಷಧಿಗಳ ಲಭ್ಯತೆ ಮತ್ತು ಪೂರೈಕೆಯನ್ನು ಪರಿಶೀಲಿಸಲು ಪ್ರಧಾನಿ ನರೇಂದ್ರ ಮೋದಿ ನಿನ್ನೆ ಉನ್ನತ ಮಟ್ಟದ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದರು.

ಔಷಧಿಗಳ ಉತ್ಪಾದನೆಯನ್ನು ಹೆಚ್ಚಿಸಲು ಸರ್ಕಾರ ಉತ್ಪಾದಕರೊಂದಿಗೆ ನಿಯಮಿತವಾಗಿ ಸಂಪರ್ಕದಲ್ಲಿದೆ ಮತ್ತು ಅಗತ್ಯವಿರುವ ಎಲ್ಲಾ ಸಹಾಯವನ್ನು ವಿಸ್ತರಿಸಿ ಎಂದು ಮೋದಿ ಹೇಳಿದ್ದಾರೆ.

ಕಳೆದ ಕೆಲವು ವಾರಗಳಲ್ಲಿ ರೆಮ್ಡೆಸಿವಿರ್ ಸೇರಿದಂತೆ ಎಲ್ಲಾ ಔಷಧಿಗಳ ಉತ್ಪಾದನೆಯು ಗಮನಾರ್ಹವಾಗಿ ಹೆಚ್ಚಾಗಿದೆ ಎಂದು ಸಭೆಯಲ್ಲಿ ಮಾಹಿತಿ ನೀಡಲಾಗಿದೆ. ಉತ್ಪಾದನೆಯನ್ನು ಹೆಚ್ಚಿಸಲು ಮತ್ತು ಅಗತ್ಯವಿರುವ ಎಲ್ಲ ಸಹಾಯವನ್ನು ವಿಸ್ತರಿಸಲು ರಾಜ್ಯಗಳೊಂದಿಗೆ ಉತ್ಪಾದಕರೊಂದಿಗೆ ನಿಯಮಿತವಾಗಿ ಸಂಪರ್ಕದಲ್ಲಿದ್ದೇವೆ, ರಾಜ್ಯಗಳಿಗೆ ಉತ್ತಮ ಪ್ರಮಾಣದಲ್ಲಿ ಔಷಧಿಗಳನ್ನು ಪೂರೈಕೆ ಮಾಡಲಾಗುತ್ತಿದೆ ಎಂದು ತಿಳಿಸಲಾಗಿದೆ.

ಮೊದಲ ಕೋವಿಡ್ -19 ಅಲೆ ಉತ್ತುಂಗದಲ್ಲಿದ್ದ ಸಂದರ್ಭದಲ್ಲಿನ ಆಮ್ಲಜನಕದ ಪೂರೈಕೆಗಿಂತ ಈಗ ಪೂರೈಕೆ ಮೂರು ಪಟ್ಟು ಹೆಚ್ಚಾಗಿದೆ ಎಂದು ಪ್ರಧಾನಿ ಕಚೇರಿ ಬುಧವಾರ ತಿಳಿಸಿದೆ.

ಕೋವಿಡ್ ಮತ್ತು ಮ್ಯೂಕೋರ್ಮೈಕೋಸಿಸ್ ನಿರ್ವಹಣೆಯಲ್ಲಿ ಬಳಸುತ್ತಿರುವ ಔಷಧಿಗಳ ಸರಬರಾಜನ್ನು ಸರ್ಕಾರ ಸಕ್ರಿಯವಾಗಿ ಗಮನಿಸುತ್ತಿದೆ ಎಂದು ಪ್ರಧಾನಿಗೆ ತಿಳಿಸಲಾಯಿತು.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top