ಬೆಂಗಳೂರು: ರಾಜ್ಯದ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಅಳವಡಿಕೆ ಮತ್ತು ಅರವಳಿಕೆ ತಜ್ಞರನ್ನು ನೇಮಕ ಮಾಡುವಂತೆ ಸೂಚನೆ ನೀಡಲಾಗಿದೆ ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.
ಹಾಗೇಯೇ ರಾಜ್ಯಕ್ಕೆ ಅಗತ್ಯವಾದ 2,480 ವೈದ್ಯರ ನೇಮಕವನ್ನು ಸಹ ಸರ್ಕಾರ ಶೀಘ್ರದಲ್ಲೇ ಮಾಡಲಿದೆ ಎಂದು ತಿಳಿಸಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ ಕಳೆದ ಆರೇಳು ತಿಂಗಳುಗಳಲ್ಲಿ ಪ್ರತಿ ತಾಲೂಕಿನ ಆಸ್ಪತ್ರೆಗಳಲ್ಲಿ 6 ವೆಂಟಿಲೇಟರ್, 50 ಆಕ್ಸಿಜನ್ ಹಾಸಿಗೆಗಳನ್ನು ಅಳವಡಿಸಲು ಸೂಚಿಸಲಾಗಿದೆ. ಆದರೆ ಈ ಕೆಲಸ ಸಂಪೂರ್ಣವಾಗಿ ಪ್ರಮಾಣದಲ್ಲಿ ಆಗಿಲ್ಲ. ಅದನ್ನು ಸರಿಯಾಗಿ ಪೂರ್ಣಗೊಳಿಸಲು ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಹಾಗೆಯೇ ಅರವಳಿಕೆ ತಜ್ಞರು, ಫಿಸಿಶಿಯನ್ಗಳು ಇಲ್ಲದ ಕಡೆಗಳಲ್ಲಿ ತಾತ್ಕಾಲಿಕ ನೆಲೆಯಲ್ಲಿ ನೇಮಕಾತಿ ಪ್ರಕ್ರಿಯೆ ನಡೆಸಲು ಸೂಚಿಸಲಾಗಿದೆ. ಈಗಾಗಲೇ 720 ತಜ್ಞರ ನೇರ ನೇಮಕಾತಿ ಮಾಡಲಾಗಿದೆ ಎಂದು ಹೇಳಿದ್ದಾರೆ. ಬೆಂಗಳೂರು ನಗರದಲ್ಲಿ ಕೊರೋನಾ ನಿಯಂತ್ರಣಕ್ಕೆ ಬೇಕಾದ ಎಲ್ಲಾ ಕ್ರಮ ತೆಗೆದುಕೊಳ್ಳಲಾಗಿದೆ. ಹಾಗೆಯೇ ಗ್ರಾಮೀಣ ಪ್ರದೇಶಗಳಲ್ಲಿ ಕೊರೋನಾ ನಿಯಂತ್ರಣ ಸಂಬಂಧಿಸಿದಂತೆ ಅಗತ್ಯ ನಿಯಂತ್ರಣ ನಿಯಮಗಳನ್ನು ಅಳವಡಿಸಲಾಗುತ್ತಿದೆ ಎಂದು ಸುಧಾಕರ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.