News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ರಬಿ ಮಾರುಕಟ್ಟೆ ಋತುವಿನಲ್ಲಿ ಎಂಎಸ್‌ಪಿಯಿಂದ 34.57 ಲಕ್ಷ ರೈತರಿಗೆ ಪ್ರಯೋಜನ

ನವದೆಹಲಿ: ಪ್ರಸ್ತುತ ನಡೆಯುತ್ತಿರುವ ರಬಿ ಮಾರ್ಕೆಟಿಂಗ್ ಸೀಸನ್ 2021-22ರಲ್ಲಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಗೋಧಿ ಖರೀದಿ ಸರಾಗವಾಗಿ ಮುಂದುವರಿಯುತ್ತಿದೆ ಎಂದು ಸರ್ಕಾರ ಹೇಳಿದೆ.

ಪಂಜಾಬ್, ಹರಿಯಾಣ, ಉತ್ತರ ಪ್ರದೇಶ, ಮಧ್ಯಪ್ರದೇಶ, ರಾಜಸ್ಥಾನ, ದೆಹಲಿ, ಗುಜರಾತ್, ಜಮ್ಮು ಮತ್ತು ಕಾಶ್ಮೀರ ಮತ್ತು ಬಿಹಾರಗಳಲ್ಲಿ ಗೋಧಿ ಖರೀದಿ ಮುಂದುವರೆದಿದೆ. ಕಳೆದ ವರ್ಷ 252.51 ಲಕ್ಷ ಮೆಟ್ರಿಕ್ ಟನ್ ಖರೀದಿ ಮಾಡಲಾಗಿದೆ, ಇದಕ್ಕೆ ಹೋಲಿಸಿದರೆ ಈ ವರ್ಷ 341.77 ಲಕ್ಷ ಮೆಟ್ರಿಕ್ ಟನ್ ಗೋಧಿಯನ್ನು ಈವರೆಗೆ ಖರೀದಿಸಲಾಗಿದೆ ಎಂದು ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

67,499 ಕೋಟಿ ರೂ.ಗಳ ಎಂಎಸ್‌ಪಿ ಮೌಲ್ಯದೊಂದಿಗೆ ಪ್ರಸ್ತುತ ರಬಿ ಮಾರ್ಕೆಟಿಂಗ್ ಸೀಸನ್ ಖರೀದಿ ಕಾರ್ಯಾಚರಣೆಗಳಿಂದ ಸುಮಾರು 34.57 ಲಕ್ಷ ರೈತರಿಗೆ ಈಗಾಗಲೇ ಲಾಭವಾಗಿದೆ ಎಂದು ಸಚಿವಾಲಯ ತಿಳಿಸಿದೆ.

ಖಾರಿಫ್ ಸೀಸನ್ 2020-21ರಲ್ಲಿ ಭತ್ತದ ಖರೀದಿಯೂ ಸರಾಗವಾಗಿ ಮುಂದುವರಿಯುತ್ತಿದೆ ಎಂದು ಸಚಿವಾಲಯ ಹೇಳಿದೆ. 733 ಲಕ್ಷ ಮೆಟ್ರಿಕ್ ಟನ್ ಭತ್ತವನ್ನು ಇಲ್ಲಿಯವರೆಗೆ ಖರೀದಿಸಲಾಗಿದೆ. ಇದು ಕಳೆದ ವರ್ಷ 681 ಲಕ್ಷ ಮೆಟ್ರಿಕ್ ಟನ್ ಖರೀದಿಸಲಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top