ಬೆಂಗಳೂರು: ಕೊರೋನಾ ಸಂಕಷ್ಟದ ಈ ಅವಧಿಯಲ್ಲಿ ಕಳೆದ 8 ವರ್ಷಗಳಿಂದ ತಾಂತ್ರಿಕ ಸಮಸ್ಯೆಗಳ ಕಾರಣಕ್ಕೆ ಮೂಲೆ ಹಿಡಿದಿದ್ದ 417 ಭೂಸ್ವಾಧೀನ ಪ್ರಕರಣಗಳನ್ನು ಇತ್ಯರ್ಥ ಪಡಿಸಿರುವುದಾಗಿ ಡಿಸಿಎಂ ಗೋವಿಂದ ಕಾರಜೋಳ ತಿಳಿಸಿದ್ದಾರೆ.
ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಗಾಗಿ 417 ಭೂಸ್ವಾಧೀನ ಪ್ರಕರಣಗಳನ್ನು ಇತ್ಯರ್ಥ ಮಾಡಲಾಗಿದ್ದು, ಜಮೀನಿಗೆ ಸಂಬಂಧಿಸಿದಂತಹ ರೈತರಿಗೆ ನೇರವಾಗಿ ಪರಿಹಾರ ಧನ ದೊರೆಯುವಂತೆ ಸರ್ಕಾರ ಕ್ರಮ ಕೈಗೊಂಡಿದೆ ಎಂದು ಹೇಳಿದ್ದಾರೆ. ಸಂಕಷ್ಟದ ಸಂದರ್ಭದಲ್ಲಿ ರೈತರು ಪರಿಹಾರ ಧನಕ್ಕಾಗಿ ಕಚೇರಿಗಳಿಗೆ ಅಲೆದಾಡುವುದನ್ನು ಈ ಮೂಲಕ ಪರಿಹರಿಸಲಾಗಿದೆ ಎಂದು ಅವರು ಹೇಳಿದ್ದಾರೆ.
ರಸ್ತೆಗಳು ಅಭಿವೃದ್ಧಿ ಕಾಮಗಾರಿಗಳಿಗೆ ಅತ್ಯಗತ್ಯ. ಈ ಹಿನ್ನೆಲೆಯಲ್ಲಿ ಭೂಸ್ವಾಧೀನ ಮಾಡಿ ರಸ್ತೆಗಳನ್ನು ಅಭಿವೃದ್ಧಿ ಮಾಡಲಾಗಿತ್ತು. ಈ ಹಿನ್ನೆಲೆಯಲ್ಲಿ ಜಮೀನು ಕೊಟ್ಟ ಫಲಾನುಭವಿಗಳಿಗೆ ಪರಿಹಾರ ಧನ ಒದಗಿಸುವ ನಿಟ್ಟಿನಲ್ಲಿ ತಕ್ಷಣವೇ ತಾಂತ್ರಿಕ ಸಮಸ್ಯೆಗಳನ್ನು ಪರಿಹರಿಸುವಂತೆ ಸರ್ಕಾರ ಸೂಚಿಸಿತ್ತು. ಅದರನ್ವಯ ಸಮಸ್ಯೆ ಇತ್ಯರ್ಥ ಕಂಡಿದ್ದು, ಪರಿಹಾರ ಮೊತ್ತವನ್ನು ಸಹ ಫಲಾನುಭವಿಗಳಿಗೆ ಒದಗಿಸಿರುವುದಾಗಿ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.