ಬೆಂಗಳೂರು: ಭಾರತೀಯ ವಿಜ್ಞಾನ ಸಂಸ್ಥೆ (ಐಐಎಸ್ಸಿ) 10 ಎಲ್ಪಿಎಂ ಸಾಮರ್ಥ್ಯದ ಆಮ್ಲಜನಕ ಸಾಂಧ್ರಕವನ್ನು ಅಭಿವೃದ್ಧಿ ಮಾಡಿದ್ದು, ಇದನ್ನು ನಗರದ ವೈದ್ಯಕೀಯ ಕಾಲೇಜಿನಲ್ಲಿ ಪರೀಕ್ಷೆಗೆ ಒಳಪಡಿಸಲಾಗುತ್ತಿದೆ ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.
ಈ ಸಂಬಂಧ ಐಐಎಸ್ಸಿ ನಿರ್ದೇಶಕ ಪ್ರೊ. ಗೋವಿಂದನ್ ರಂಗರಾಜನ್ ಜೊತೆಗೆ ಚರ್ಚೆ ನಡೆಸಿದ ಸಚಿವರು ಈ ವಿಚಾರಕ್ಕೆ ಸಂಬಂಧಿಸಿದಂತೆ ಮಾಹಿತಿ ಪಡೆದುಕೊಂಡಿದ್ದಾರೆ.
ಇದೇ ವೇಳೆ ಮಾತನಾಡಿದ ರಂಗರಾಜನ್, 30 ಡಿಗ್ರಿ ಸೆ. ತಾಪಮಾನದಲ್ಲಿಯೂ ದಾಸ್ತಾನು ಮಾಡಬಹುದಾದ ಲಸಿಕೆ, ದಕ್ಷ ಆಕ್ಸಿಜನ್ ಕಾನ್ಸನ್ಟ್ರೇಟರ್ಗಳು ಸೇರಿದಂತೆ ಕೊರೋನಾ ವಿರುದ್ಧ ಹೋರಾಟದಲ್ಲಿ ಬಳಸುವ ಮತ್ತಿತರ ಅಗತ್ಯ ಆವಿಷ್ಕಾರಗಳನ್ನು ಐಐಎಸ್ಸಿ ವಿಜ್ಞಾನಿಗಳು ನಡೆಸುತ್ತಿರುವುದಾಗಿ ತಿಳಿಸಿದ್ದಾರೆ.
ಈಗಾಗಲೇ ವಿಜ್ಞಾನಿಗಳು 10 ಎಲ್ಪಿಎಂ ಸಾಮರ್ಥ್ಯವುಳ್ಳ ಆಕ್ಸಿಜನ್ ಕಾನ್ಸನ್ಟ್ರೇಟರ್ಗಳನ್ನು ಅಭಿವೃದ್ಧಿ ಮಾಡಿದ್ದಾರೆ. ಇವುಗಳು 90% ಆಕ್ಸಿಜನ್ ನೀಡುವ ಸಾಮರ್ಥ್ಯವನ್ನು ಒಳಗೊಂಡಿದೆ. ಇವುಗಳಿಗೆ ಸಿಡಿಎಸ್ಸಿಒ ದಿಂದ ಬಳಕೆಗೆ ಅನುಮೋದನೆ ದೊರೆಯುವಂತೆ ಸಹಕಾರ ನೀಡುವಂತೆಯೂ ರಂಗರಾಜನ್ ಸಚಿವರಿಗೆ ಮನವಿ ಮಾಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.