ಬೆಂಗಳೂರು: ಕೊರೋನಾ ಸಂಕಷ್ಟ ಪರಸ್ಪರ ಕಾಲೆಳೆಯುವ, ರಾಜಕೀಯ ಮಾಡುವ ಕಾಲವಲ್ಲ. ಬದಲಾಗಿ ಒಗ್ಗಟ್ಟಾಗಿ ಕೆಲಸ ಮಾಡುವ ಸಮಯ. ಇದನ್ನು ಟೀಕಿಸುವವರು ಮೊದಲು ಅರಿಯಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ತಿಳಿಸಿದ್ದಾರೆ.
ಈಗಾಗಲೇ ದೇಶದಲ್ಲಿ ಎರಡು ಘಟಕಗಳು ಲಸಿಕೆ ನೀಡುವ ಕೆಲಸ ಮಾಡುತ್ತಿವೆ. ಹತ್ತೊಂಬತ್ತು ಕೋಟಿ ಲಸಿಕೆ ನೀಡಲಾಗಿದೆ. ಆರಂಭದಲ್ಲಿ ಕೊರೋನಾ ಲಸಿಕೆಯನ್ನು ಬಿಜೆಪಿ ಲಸಿಕೆ ಎಂದವರೇ ಸದ್ಯ ಲಸಿಕೆ ಸಿಗುತ್ತಿಲ್ಲ ಎಂದು ಕಣ್ಣೀರು ಹಾಕುತ್ತಿದ್ದಾರೆ ಎಂದು ಕಟೀಲ್ ಹೇಳಿದ್ದಾರೆ.
ಲಸಿಕೆಯ ಬಗ್ಗೆ ಸುಳ್ಳು ಮಾಹಿತಿ ಬಿತ್ತಿ ಜನರ ಜೀವದ ಜೊತೆ ಆಟವಾಡಿದರು. ಅಂದು ನಂಬಿಕೆ ಇರಲಿಲ್ಲ. ಇಂದು ಲಸಿಕೆ ಇಲ್ಲ ಎಂದು ಹೇಳುತ್ತಿದ್ದಾರೆ. ಜನರ ದಾರಿ ತಪ್ಪಿಸಿದ್ದರಿಂದ ಹಲವರು ಆ ಸಮಯದಲ್ಲಿ ಲಸಿಕೆ ತೆಗೆದುಕೊಂಡಿಲ್ಲ. ಸರ್ಕಾರದ ಕೊರೋನಾ ನಿಯಂತ್ರಣ ಕೆಲಸಗಳನ್ನು ವಿಪಕ್ಷಗಳು ವಿರೋಧಿಸಿ ಜನರ ದಾರಿ ತಪ್ಪಿಸುತ್ತಿವೆ. ಇದರಲ್ಲು ರಾಜಕೀಯ ಮಾಡುವ ಬದಲು ಜನರಿಗೆ ಆತ್ಮಸ್ಥೈರ್ಯ ತುಂಬಿ ಎಂದು ಕಟೀಲ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.