News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಜಲ್ ಜೀವನ್ ಮಿಷನ್: 4.17 ಕೋಟಿ ಗ್ರಾಮೀಣ ಕುಟುಂಬಗಳಿಗೆ ಒದಗಿಸಲಾಗಿದೆ ನಲ್ಲಿ ನೀರು

ನವದೆಹಲಿ: ಜಲ್ ಜೀವನ್ ಮಿಷನ್ ಅಡಿಯಲ್ಲಿ 4.17 ಕೋಟಿಗೂ ಹೆಚ್ಚು ಗ್ರಾಮೀಣ ಕುಟುಂಬಗಳಿಗೆ ಹೊಸ ನಲ್ಲಿ ನೀರಿನ ಸಂಪರ್ಕವನ್ನು ಒದಗಿಸಲಾಗಿದೆ ಎಂದು ಸರ್ಕಾರ ಹೇಳಿದೆ.

ಪ್ರಧಾನಿ ನರೇಂದ್ರ ಮೋದಿ ಅವರು 2019 ರ ಆಗಸ್ಟ್ 15 ರಂದು ಈ ಮಿಷನ್ ಅನ್ನು ಘೋಷಿಸಿದ್ದರು, ಇದು 2024 ರ ವೇಳೆಗೆ ದೇಶದ ಪ್ರತಿ ಗ್ರಾಮೀಣ ಕುಟುಂಬಗಳಿಗೆ ನಲ್ಲಿ ನೀರಿನ ಸಂಪರ್ಕವನ್ನು ಒದಗಿಸುವ ಗುರಿಯನ್ನು ಹೊಂದಿದೆ.

ಘೋಷಣೆಯ ಸಮಯದಲ್ಲಿ, ಸುಮಾರು 3.23 ಕೋಟಿ ಗ್ರಾಮೀಣ ಕುಟುಂಬಗಳು ನಲ್ಲಿ ನೀರಿನ ಸಂಪರ್ಕವನ್ನು ಹೊಂದಿದ್ದವು. ಈಗ ದೇಶದಲ್ಲಿ 7.41 ಕೋಟಿಗೂ ಹೆಚ್ಚು ಗ್ರಾಮೀಣ ಕುಟುಂಬಗಳು ತಮ್ಮ ಮನೆಗಳಲ್ಲಿ ಧಲ್ಲಿ ನೀರನ್ನು ಪಡೆಯುತ್ತಿದ್ದಾರೆ ಎಂದು ಜಲ ಶಕ್ತಿ ಸಚಿವಾಲಯ ತಿಳಿಸಿದೆ.

ರಾಷ್ಟ್ರೀಯ ಜಲ ಜೀವನ್ ಮಿಷನ್‌ಗೆ ಆಯ್ಕೆಯಾದ ವಲಯ ಪಾಲುದಾರರೊಂದಿಗೆ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ವತಿಯಿಂದ  ವೆಬ್‌ನಾರ್ ಆಯೋಜಿಸಲಾಗಿದೆ ಎಂದು ಸಚಿವಾಲಯ ತಿಳಿಸಿದೆ. ಈ ವೆಬ್‌ನಾರ್ ಸಮಯದಲ್ಲಿ, ನೀರಿನ ಮೂಲಗಳನ್ನು ಕ್ಷೀಣಿಸುವುದು, ನೀರಿನ ಗುಣಮಟ್ಟ-ಸಮಸ್ಯೆಗಳ ಹೆಚ್ಚಳ ಮತ್ತು ವಿವಿಧ ವಲಯಗಳಿಂದ ನೀರಿನ ಬೇಡಿಕೆಗಳಂತಹ ಸವಾಲುಗಳನ್ನು ಸಮಗ್ರವಾಗಿ ಪರಿಹರಿಸುವ ಬಗ್ಗೆ ಚರ್ಚೆ ನಡೆದಿದೆ ಎಂದಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top