ಬೆಂಗಳೂರು: ಕೋಲಾರದ ಮಾಲೂರಿನಲ್ಲಿ ಭಾರತ್ ಬಯೋಟೆಕ್ನ ಕೋವ್ಯಾಕ್ಸಿನ್ ಲಸಿಕೆ ತಯಾರಿಕಾ ಘಟಕ ಆರಂಭಿಸಲಾಗುತ್ತದೆ ಎಂದು ಡಿಸಿಎಂ ಡಾ ಅಶ್ವತ್ಥ್ ನಾರಾಯಣ್ ತಿಳಿಸಿದ್ದಾರೆ.
ಬೆಂಗಳೂರಿಗೆ ಸಮೀಪದಲ್ಲೇ ಇರುವ ಮಾಲೂರಿನಲ್ಲಿ ಈ ಘಟಕ ಸ್ಥಾಪನೆ ಮಾಡಲಾಗುತ್ತಿದ್ದು, ಇಲ್ಲಿಗೆ ರೈಲು ಸೇರಿದಂತೆ ಇನ್ನಿತರ ಸಾರಿಗೆ ಸಂಪರ್ಕ ವ್ಯವಸ್ಥೆ ಸಹ ಉತ್ತಮವಾಗಿದೆ. ಲಸಿಕೆ ತಯಾರಿಕೆಗೆ ಸಂಬಂಧಿಸಿದಂತೆ ಸರ್ಕಾರ ಸಹ ಎಲ್ಲಾ ರೀತಿಯ ಸಮ್ಮತಿ ವ್ಯಕ್ತಪಡಿಸಿದೆ. ಸದ್ಯ ಕಂಪೆನಿಯು ಆಡಳಿತಾತ್ಮಕ ಕೆಲಸಗಳನ್ನು ಪೂರ್ಣಗೊಳಿಸುತ್ತಿದ್ದು, ಸಿವಿಲ್ ಕಾಮಗಾರಿಗಳನ್ನು ಆರಂಭಿಸಿದೆ ಎಂದು ಹೇಳಿದ್ದಾರೆ. ಇವೆಲ್ಲವೂ ಶೀಘ್ರ ಪೂರ್ಣಗೊಂಡು ಸದ್ಯದಲ್ಲೇ ಲಸಿಕೆ ತಯಾರಿ ಆರಂಭವಾಗಲಿದೆ ಎಂದು ಅವರು ಹೇಳಿದ್ದಾರೆ.
ಹಾಗೆಯೇ ಯಾವುದೇ ಲಸಿಕೆ ತಯಾರಿಕಾ ಸಂಸ್ಥೆಗಳು ರಾಜ್ಯದಲ್ಲಿ ತಮ್ಮ ಉತ್ಪಾದನಾ ಘಟಕ ಆರಂಭಿಸಲು ಮುಂದೆ ಬಂದಲ್ಲಿ ಅಗತ್ಯ ನೆರವು ನೀಡಲು ಪೂರಕ ಕ್ರಮಗಳನ್ನು, ನೆರವನ್ನು ಸರ್ಕಾರ ನೀಡಲಿದೆ ಎಂದು ಅವರು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.