https://chat.whatsapp.com/BKucwX3HbX4J90X4VL22yG
News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ
×
Home About Us Advertise With s Contact Us

ತೌಕ್ತೆ ಚಂಡಮಾರುತ: ಸಿದ್ಧತೆ ಪರಿಶೀಲಿಸಲು ಇಂದು ಮೋದಿ ಮಹತ್ವದ ಸಭೆ

ನವದೆಹಲಿ:  ತೌಕ್ತೆ ಚಂಡಮಾರುತವನ್ನು ಎದುರಿಸಲು ನಡೆಸಿರುವ ಸಿದ್ಧತೆಗಳನ್ನು ಪರಿಶೀಲಿಸುವ ಸಲುವಾಗಿ ಪ್ರಧಾನಿ ನರೇಂದ್ರ ಮೋದಿ ಇಂದು ಮಹತ್ವದ ಸಭೆ ನಡೆಸಲಿದ್ದಾರೆ ಎಂದು ಸರ್ಕಾರದ ಮೂಲಗಳು ತಿಳಿಸಿವೆ.

ಸಭೆಯಲ್ಲಿ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸೇರಿದಂತೆ ಸರ್ಕಾರಿ ಇಲಾಖೆಗಳ ಉನ್ನತ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಅರೇಬಿಯನ್ ಸಮುದ್ರದಲ್ಲಿ ವಾಯುಭಾರ ಕುಸಿತದೊಂದಿಗೆ ಚಂಡ ಮಾರುತ ತೀವ್ರತೆ ಪಡೆಯುವ  ಸಾಧ್ಯತೆಯಿದೆ ಮತ್ತು ಒಂದು ದಿನದ ನಂತರ ಗುಜರಾತ್ ಕರಾವಳಿಯನ್ನು ದಾಟಲಿದೆ ಎಂದು ಭಾರತ ಹವಾಮಾನ ಇಲಾಖೆ ಅಥವಾ ಐಎಂಡಿ ಶುಕ್ರವಾರ ತಿಳಿಸಿತ್ತು.

“ಹವಾಮಾನ ಪರಿಸ್ಥಿತಿಯು  ತೀವ್ರಗೊಂಡಿದೆ. ಇದು ಶನಿವಾರ ಬೆಳಿಗ್ಗೆ ಹೊತ್ತಿಗೆ ಚಂಡಮಾರುತ ತೌಕ್ತೆ ಇನ್ನಷ್ಟು ತೀವ್ರಗೊಳ್ಳುವ ಸಾಧ್ಯತೆಯಿದೆ ಮತ್ತು ಶನಿವಾರ ರಾತ್ರಿಯ ವೇಳೆಗೆ ಮತ್ತಷ್ಟು ತೀವ್ರತೆ ಪಡೆಯಲಿದೆ” ಎಂದಿದೆ.

ಚಂಡಮಾರುತದ ಪರಿಣಾಮಗಳನ್ನು ಎದುರಿಸಲು ರಾಷ್ಟ್ರೀಯ ವಿಪತ್ತು ಪ್ರತಿಕ್ರಿಯೆ ಪಡೆ ಅಥವಾ ಎನ್‌ಡಿಆರ್‌ಎಫ್ 53 ತಂಡಗಳನ್ನು ಮೀಸಲಿಟ್ಟಿದೆ. ಈಗಾಗಲೇ ಹಲವು ತಂಡಗಳನ್ನು ವಿವಿಧ ರಾಜ್ಯಗಳಲ್ಲಿ ನಿಯೋಜಿಸಲಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

 

Recent News

Back To Top