ಬೆಂಗಳೂರು: ಬಿಬಿಎಂಪಿ ಕೊರೋನಾ ವಾರ್ ರೂಂ ನಲ್ಲಿ ನಡೆಯುತ್ತಿದ್ದ ಬೆಡ್ ಸ್ಕ್ಯಾಂ ಹಗರಣವನ್ನು ಬಯಲಿಗೆಳೆದಿದ್ದ ಸಂಸದ ತೇಜಸ್ವಿ ಸೂರ್ಯ ಅವರಿಗೆ ಹೈಕೋರ್ಟ್ ನಿರಾಳತೆ ಒದಗಿಸಿದೆ.
ಈ ಅಕ್ರಮವನ್ನು ಬಯಲಿಗೆಳೆದ ಬಳಿಕ ತೇಜಸ್ವಿ ಸೂರ್ಯ ಅವರ ವಿರುದ್ಧ ಕಾಂಗ್ರೆಸ್ನ ವೈ ಬಿ ಶ್ರೀವತ್ಸ ಸಲ್ಲಿಸಿದ್ದ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ಈ ಅರ್ಜಿ ರಾಜಕೀಯ ಪ್ರೇರಿತವಾಗಿದೆಯೇ ಹೊರತು ಯಾವುದೇ ರೀತಿಯ ಸಾರ್ವಜನಿಕ ಹಿತಾಸಕ್ತಿಯನ್ನು ಹೊಂದಿಲ್ಲ ಎಂದು ಕೋರ್ಟ್ ತಿಳಿಸಿದೆ.
ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆರಂಭದಲ್ಲಿ ಬೆಡ್ ಸ್ಕ್ಯಾಂ ದಂಧೆ ಬಯಲಿಗೆಳೆದ ತೇಜಸ್ವಿ ಅವರಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದ ಕಾಂಗ್ರೆಸ್ ಬಳಿಕ ಬಣ್ಣ ಬದಲಾಯಿಸಿ ಇದಕ್ಕೆ ಕೋಮುವಾದಿ ಬಣ್ಣ ಬಳಿಯುವ ಮೂಲಕ ಹೊಲಸು ರಾಜಕೀಯಕ್ಕೆ ಇಳಿದಿತ್ತು. 17 ಮಂದಿ ಮುಸ್ಲಿಂ ಸಮುದಾಯಕ್ಕೆ ಸೇರಿದ ಸಿಬ್ಬಂದಿಗಳ ಹೆಸರನ್ನು ತೇಜಸ್ವಿ ಹೇಳಿದ್ದಾರೆ. ಅವರು ಕೇವಲ ಒಂದು ಸಮುದಾಯದ ವಿರುದ್ಧ ಪಿತೂರಿ ನಡೆಸುತ್ತಿದ್ದಾರೆ ಎಂದೆಲ್ಲ ಕಾಂಗ್ರೆಸ್ ಆರೋಪಿಸಿತ್ತು. ಈ ಸಂಬಂಧ ಕಾಂಗ್ರೆಸ್ನ ಶ್ರೀವತ್ಸ ಹೈಕೋರ್ಟ್ಗೆ ತೇಜಸ್ವಿ ಸೂರ್ಯ ವಿರುದ್ಧ ಅರ್ಜಿ ಸಲ್ಲಿಸಿದ್ದರು.
ಈ ಅರ್ಜಿಯನ್ನು ತಿರಸ್ಕರಿಸಿರುವ ಹೈಕೋರ್ಟ್ ಇದೊಂದು ರಾಜಕೀಯ ದುರುದ್ದೇಶದಿಂದ ಸಲ್ಲಿಸಲಾದ ಅರ್ಜಿಯೇ ಹೊರತು ಯಾವುದೇ ಸಾಮಾಜಿಕ ಕಳಕಳಿಯಿಂದ ಈ ಅರ್ಜಿ ಸಲ್ಲಿಕೆಯಾಗಿಲ್ಲ ಎಂದು ಸ್ಪಷ್ಟಪಡಿಸಿದೆ. ಆ ಮೂಲಕ ತೇಜಸ್ವಿ ಸೂರ್ಯ ಅವರಿಗೆ ರಿಲೀಫ್ ನೀಡಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.