News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಕೊರೊನಾವೈರಸ್ ಸಕ್ರಿಯ ಪ್ರಕರಣಗಳು ಇಳಿಕೆ ಕಾಣುತ್ತಿವೆ

ನವದೆಹಲಿ: ಕೋವಿಡ್-19 ಸಾಂಕ್ರಾಮಿಕ ರೋಗದ ಎರಡನೇ ಅಲೆಗೆ ನಲುಗಿರುವ ಭಾರತದಲ್ಲಿ  ಸಕ್ರಿಯ ಸಂಖ್ಯೆಯ ಕೊರೊನಾವೈರಸ್ ಪ್ರಕರಣಗಳಲ್ಲಿ ಕ್ಷೀಣಿತೆ ಕಂಡು ಬರುತ್ತಿದೆ. ಇದರೊಂದಿಗೆ, ದೇಶದಲ್ಲಿ ಚೇತರಿಕೆ ದರ ನಿರಂತರವಾಗಿ ಸುಧಾರಿಸುತ್ತಿದೆ. ಆದರೂ, ಹಲವಾರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ಇನ್ನೂ ಹೊಸ ಪ್ರಕರಣಗಳಲ್ಲಿ ಹೆಚ್ಚಳವನ್ನು ದಾಖಲಿಸುತ್ತಿವೆ.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಇಂದು, ಸಕ್ರಿಯ ಪ್ರಕರಣಗಳಲ್ಲಿ ಶೇ 15.07 ರಷ್ಟು ಪಾಸಿಟಿವ್ ಪ್ರಕರಣಗಳಿವೆ. ದೇಶದಲ್ಲಿ ಪ್ರಸ್ತುತ 36.73 ಲಕ್ಷ ಸಕ್ರಿಯ ಪ್ರಕರಣಗಳಿವೆ ಎಂದು ಹೇಳಿದೆ.

ಕಳೆದ ಹಲವು ದಿನಗಳಿಂದ ದೇಶವು ಪ್ರತಿದಿನ ಮೂರು ಲಕ್ಷ ಚೇತರಿಕೆಗಳನ್ನು ನೋಂದಾಯಿಸುತ್ತಿರುವುದರಿಂದ, ಚೇತರಿಕೆಯ ಪ್ರಮಾಣವು ಶೇಕಡಾ 83.83 ಕ್ಕೆ ಸುಧಾರಿಸಿದೆ. ಈ ಸಾಂಕ್ರಾಮಿಕ ಕಾಯಿಲೆಯಿಂದ 24 ಗಂಟೆಗಳಲ್ಲಿ ಮೂರು ಲಕ್ಷ 53 ಸಾವಿರ ರೋಗಿಗಳು ಚೇತರಿಸಿಕೊಂಡಿದ್ದಾರೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ. ಇಲ್ಲಿಯವರೆಗೆ, 2.4 ಕೋಟಿ ರೋಗಿಗಳು ಈಗಾಗಲೇ ಈ ಕಾಯಿಲೆಯಿಂದ ಚೇತರಿಸಿಕೊಂಡಿದ್ದಾರೆ.

ಕಳೆದ 24 ಗಂಟೆಗಳಲ್ಲಿ ದೇಶವು ಮೂರು ಲಕ್ಷ 26 ಸಾವಿರ ಹೊಸ ಕೋವಿಡ್ ಪ್ರಕರಣಗಳನ್ನು ದಾಖಲಿಸಿದೆ. ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಒಟ್ಟು 3,890 ಸಾವುಗಳು ಸಂಭವಿಸಿವೆ ಎಂದು ಆರೋಗ್ಯ ಸಚಿವಾಲಯ ತಿಳಿಸಿದೆ.

ಈ ನಡುವೆ ನಿನ್ನೆ 16 ಲಕ್ಷ 93 ಸಾವಿರ ಕೋವಿಡ್ ಪರೀಕ್ಷೆಗಳನ್ನು ನಡೆಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಮಂಡಳಿ ತಿಳಿಸಿದೆ. ಈವರೆಗೆ ದೇಶದಲ್ಲಿ 31 ಕೋಟಿ 30 ಲಕ್ಷ ಪರೀಕ್ಷೆಗಳನ್ನು ನಡೆಸಲಾಗಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top