ಬೆಂಗಳೂರು: ಕೊರೋನಾ ಹಿನ್ನೆಲೆಯಲ್ಲಿ ಸೊಂಕಿತರ ಚಿಕಿತ್ಸೆಗೆ ಅಗತ್ಯವಾದ ರೆಮ್ಡೆಸಿವಿರ್ ಚುಚ್ಚುಮದ್ದುಗಳನ್ನು ಕೇಂದ್ರ ಸರ್ಕಾರ ಹಲವು ರಾಜ್ಯಗಳಿಗೆ ಹಂಚಿಕೆ ಮಾಡಿದೆ ಎಂದು ಕೇಂದ್ರ ಸಚಿವ ಡಿ ವಿ ಸದಾನಂದ ಗೌಡ ಹೇಳಿದ್ದಾರೆ.
ಮೇ 17 ರಿಂದ ಮೇ 23 ರ ವರೆಗಿನ ಬಳಕೆಗೆ ಸಂಬಂಧಿಸಿದಂತೆ ಹಲವು ರಾಜ್ಯಗಳಿಗೆ ಒಟ್ಟು 23 ಲಕ್ಷ ವಯಲ್ಸ್ ರೆಮ್ಡೆಸಿವಿರ್ ಹಂಚಿಕೆ ಮಾಡಿದೆ. ಕರ್ನಾಟಕಕ್ಕೆ 4.25 ಲಕ್ಷ ವಯಲ್ಸ್ ರೆಮ್ಡೆಸಿವಿರ್ ಅನ್ನು ಕೇಂದ್ರ ಸರ್ಕಾರ ಒದಗಿಸಿ ಕೊಟ್ಟಿದೆ ಎಂದು ಅವರು ಹೇಳಿದ್ದಾರೆ.
ಎ. 21 ರಿಂದ ಈವರೆಗೆ ಹಲವು ರಾಜ್ಯಗಳಿಗೆ ಸುಮಾರು 73 ಲಕ್ಷ ವಯಲ್ಸ್ ರೆಮ್ಡೆಸಿವಿರ್ ಔಷಧವನ್ನು ಕೇಂದ್ರ ಸರ್ಕಾರ ಹಂಚಿಕೆ ಮಾಡಿದೆ. ಅದರಲ್ಲಿ ಕರ್ನಾಟಕಕ್ಕೆ 10 ಲಕ್ಷ ವಯಲ್ಸ್ ದೊರೆತಿದೆ. ಮಹಾರಾಷ್ಟ್ರ ಈ ವರೆಗೆ ಅತೀ ಹೆಚ್ಚು ರೆಮ್ಡೆಸಿವಿರ್ ಪಡೆದ ರಾಜ್ಯವಾಗಿದ್ದು, ಎರಡನೇ ಸ್ಥಾನದಲ್ಲಿ ಕರ್ನಾಟಕ ಇದೆ ಎಂದು ಸದಾನಂದ ಗೌಡ ತಿಳಿಸಿದ್ದಾರೆ. ರಾಜ್ಯಗಳಲ್ಲಿನ ಕೊರೋನಾ ಸೋಂಕಿತರ ಸಕ್ರಿಯ ಪ್ರಕರಣಗಳನ್ನು ಆಧರಿಸಿ ಈ ಔಷಧ ಹಂಚಿಕೆ ನಡೆಯುತ್ತದೆ ಎಂದು ಕೇಂದ್ರ ಸಚಿವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.