ಲಕ್ನೋ: ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನೇತೃತ್ವದ ಉತ್ತರ ಪ್ರದೇಶ ಸರ್ಕಾರವು ತನ್ನ ರಾಜ್ಯದ ಪೊಲೀಸ್ ಪಡೆಗಳಿಗೆ ಸಮರ್ಪಕ ಮತ್ತು ತ್ವರಿತ ಆರೋಗ್ಯ ಬೆಂಬಲವನ್ನು ಖಚಿತಪಡಿಸಿಕೊಳ್ಳಲು ಮೀಸಲು ಕೋವಿಡ್ ಆರೈಕೆ ಕೇಂದ್ರಗಳನ್ನು (ಸಿಸಿಸಿ) ಸ್ಥಾಪಿಸಿದೆ ಎಂದು ಮೂಲಗಳು ವರದಿ ಮಾಡಿವೆ.
ಪೊಲೀಸ್ ಪಡೆಗಳಿಗಾಗಿ ಕೋವಿಡ್ ಆರೈಕೆ ಕೇಂದ್ರಗಳನ್ನು ರಾಜ್ಯ ಸರ್ಕಾರವು 66 ಜಿಲ್ಲೆಗಳ ರಿಸರ್ವ್ ಪೊಲೀಸ್ ಲೈನ್ಗಳಲ್ಲಿ ಮತ್ತು 34 ಪಿಎಸಿ ಬೆಟಾಲಿಯನ್ಗಳಲ್ಲಿ ಸ್ಥಾಪಿಸಿದೆ. ಈ ಕೇಂದ್ರಗಳಲ್ಲಿ ಒಟ್ಟು 2,993 ಹಾಸಿಗೆಗಳಿದ್ದು, ಅವುಗಳಲ್ಲಿ 299 ಆಮ್ಲಜನಕ ಬೆಂಬಲವನ್ನು ಹೊಂದಿವೆ.
ಈ ಕೇಂದ್ರಗಳು ಸಮರ್ಪಕ ಐಸೋಲೇಷನ್ ಮತ್ತು ಕ್ವಾರಂಟೈನ್ ಸೌಲಭ್ಯವನ್ನು ಒದಗಿಸಲಿದೆ, ಜೊತೆಗೆ ಲಕ್ಷಣರಹಿತ ಅಥವಾ ಸ್ವಲ್ಪ ರೋಗಲಕ್ಷಣದ ಪೊಲೀಸ್ ಸಿಬ್ಬಂದಿಗೆ ತಕ್ಷಣದ ವೈದ್ಯಕೀಯ ನೆರವು ನೀಡುತ್ತದೆ.
ರಾಜ್ಯದ ಮಾಹಿತಿ ಇಲಾಖೆ ಹಂಚಿಕೊಂಡ ವಿವರಗಳ ಪ್ರಕಾರ, ಈಗಾಗಲೇ 589 ಪೊಲೀಸ್ ಸಿಬ್ಬಂದಿಗಳು ಕೇಂದ್ರಗಳಲ್ಲಿ ಚಿಕಿತ್ಸೆ ಪಡೆದಿದ್ದಾರೆ. ಈ ಪೈಕಿ 244 ಜನರನ್ನು ಈಗಾಗಲೇ ಬಿಡುಗಡೆ ಮಾಡಲಾಗಿದ್ದು, ಇನ್ನೂ 322 ಮಂದಿ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.