ಬೆಂಗಳೂರು: ಕೊರೋನಾ ಸೋಂಕಿತರ ಚಿಕಿತ್ಸೆಗೆ ಬಿಜಿಎಸ್ ಮೆಡಿಕಲ್ ಕಾಲೇಜಿನ ವತಿಯಿಂದ 383 ಹಾಸಿಗೆಗಳ ವ್ಯವಸ್ಥೆ ಕಲ್ಪಿಸಲಾಗಿದ್ದು, ಈ ವ್ಯವಸ್ಥೆಗೆ ಮುಖ್ಯಮಂತ್ರಿ ಯಡಿಯೂರಪ್ಪ ಚಾಲನೆ ನೀಡಿದರು.
ಹಾಗೆಯೇ ಮೈಸೂರು ಹಸಿರು ಪ್ರತಿಷ್ಠಾನ ವತಿಯಿಂದ ಹಂಚಿಕೆ ಮಾಡಲಾದ 2 ಸಾವಿರ ಗಿಡಗಳನ್ನು ಬಿಜಿಎಸ್ ಕ್ಯಾಂಪಸ್ನಲ್ಲಿ ಗಿಡ ನೆಡುವ ಮೂಲಕ ಉದ್ಘಾಟಿಸಿದರು.
ಬಿಜಿಎಸ್ ಆಸ್ಪತ್ರೆ ವತಿಯಿಂದ ಆಕ್ಸಿಜನ್, ಐಸಿಯು, ಸಾಮಾನ್ಯ ಹಾಸಿಗೆಗಳ ವ್ಯವಸ್ಥೆ ಮಾಡಲಾಗಿದೆ. ಮೈಸೂರು ಹಸಿರು ಪ್ರತಿಷ್ಠಾನದ ವತಿಯಿಂದ 2 ಸಾವಿರ ಸಸಿಗಳನ್ನು ನೆಡಲಾಗಿದೆ. ಈ ಎಲ್ಲಾ ಕಾರ್ಯಗಳು ತಮಗೆ ಸಂತಸ ನೀಡಿದೆ ಎಂದು ಮುಖ್ಯಮಂತ್ರಿ ತಿಳಿಸಿದ್ದಾರೆ. ಕಳೆದ ಮೂರು ವರ್ಷಗಳಿಂದ ಹಸಿರು ಪ್ರತಿಷ್ಠಾನ ಕಾರ್ಯ ನಿರ್ವಹಿಸುತ್ತಿದ್ದು ಸಾಮೂಹಿಕವಾಗಿ ಸಸಿಗಳನ್ನು ನೆಡುವ ಕೆಲಸ ಮಾಡುತ್ತಿದೆ. ಇದು ಎಲ್ಲರಿಗೂ ಮಾದರಿ ಎಂದು ಯಡಿಯೂರಪ್ಪ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಬೆಂಗಳೂರಿನ ಬಿ.ಜಿ.ಎಸ್ ಮೆಡಿಕಲ್ ಕಾಲೇಜ್ ನಲ್ಲಿ ಆಧುನಿಕ ಸೌಲಭ್ಯ ಹೊಂದಿರುವ ಒಟ್ಟು 383 ಹಾಸಿಗೆಗಳ ಕೋವಿಡ್ ಕೇರ್ ಸೆಂಟರ್ ಅನ್ನು, ಆದಿಚುಂಚನಗಿರಿ ಸಂಸ್ಥಾನದ ಪೂಜ್ಯ ಶ್ರೀ ನಿರ್ಮಲಾನಂದನಾಥ ಸ್ವಾಮೀಜಿಗಳ ಸಾನ್ನಿಧ್ಯದಲ್ಲಿ ಇಂದು ಉದ್ಘಾಟಿಸಲಾಯಿತು. ನಂತರ, ಹಸಿರು ಪ್ರತಿಷ್ಠಾನದ ವತಿಯಿಂದ 2 ಸಾವಿರ ಸಸಿಗಳನ್ನು ಶ್ರೀಮಠಕ್ಕೆ ಹಸ್ತಾಂತರಿಸಲಾಯಿತು pic.twitter.com/npvtiUjFSE
— B.S.Yediyurappa (@BSYBJP) May 17, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.