ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ಜೋರಾಗಿದ್ದು, ಈ ಪರಿಸ್ಥಿತಿ ನಿಭಾಯಿಸಲು ಸರ್ಕಾರ ವಿದೇಶಗಳಿಂದ ಔಷಧ ಹಾಗೂ ಇತರೆ ವೈದ್ಯಕೀಯ ಉಪಕರಣಗಳ ಖರೀದಿಗೆ ಚಿಂತನೆ ನಡೆಸುತ್ತಿದೆ.
ಈ ಸಂಬಂಧ ನೆರೆಯ ಮಿತ್ರ ರಾಷ್ಟ್ರಗಳ ರಾಜತಾಂತ್ರಿಕರ ಜೊತೆಗೆ ಡಿಸಿಎಂ ಡಾ ಅಶ್ವತ್ಥ್ ನಾರಾಯಣ್ ಅವರು ಮಹತ್ವದ ಸಮಾಲೋಚನೆ ನಡೆಸಿದ್ದಾರೆ. ಕೊರೋನಾ ನಿಯಂತ್ರಣ ಕಾರ್ಯತಂತ್ರ, ವ್ಯಾಕ್ಸಿನೇಷನ್, ವೈದ್ಯಕೀಯ ಸೌಲಭ್ಯ, ಪರಸ್ಪರ ಸಹಕಾರ ಮೊದಲಾದ ವಿಚಾರಗಳ ಬಗ್ಗೆ ಈ ಸಮಾಲೋಚನೆಯ ಸಂದರ್ಭದಲ್ಲಿ ಚರ್ಚೆ ನಡೆಸಲಾಗಿದೆ.
ಅಮೆರಿಕ, ಕೆನಡಾ, ನೆದರ್ಲ್ಯಾಂಡ್, ಬ್ರಿಟನ್, ಜರ್ಮನಿ, ಇಸ್ರೇಲ್, ಆಸ್ಟ್ರೇಲಿಯಾ, ಡೆನ್ಮಾರ್ಕ್, ದ. ಕೊರಿಯಾ, ಸ್ವಿಟ್ಜರ್ಲೆಂಡ್, ಜಪಾನ್ ಮೊದಲಾದ ದೇಶಗಳ ರಾಜತಾಂತ್ರಿಕರು ಈ ಸಭೆಯಲ್ಲಿ ಭಾಗವಹಿಸಿದ್ದರು.
ಈ ಬಗ್ಗೆ ಮಾತನಾಡಿರುವ ಡಾ ಅಶ್ವತ್ಥ್ ನಾರಾಯಣ್, ಜಾಗತಿಕ ರಾಷ್ಟ್ರಗಳ ಜೊತೆಗೆ ಕೊರೋನಾ ವಿರುದ್ಧ ಹೋರಾಟಕ್ಕೆ ಎಲ್ಲಾ ರೀತಿಯ ಸಹಕಾರ ಸಂಬಂಧ ಹೊಂದಲು ಕರ್ನಾಟಕ ಸಿದ್ಧವಿದೆ. ರಾಜ್ಯದಲ್ಲಿ ಎರಡನೇ ಅಲೆಯನ್ನು ನಿಭಾಯಿಸುವ ನಿಟ್ಟಿನಲ್ಲಿ ಉಂಟಾಗಿರುವ ವೈದ್ಯಕೀಯ ಸೇರಿದಂತೆ ಇನ್ನಿತರ ವಸ್ತು, ವಿಚಾರಗಳ ಕೊರತೆಯನ್ನು ಸರಿದೂಗಿಸಲು ಸರ್ಕಾರ ಅಗತ್ಯ ಪ್ರಯತ್ನ ನಡೆಸುತ್ತಿದೆ. ಗ್ರಾಮೀಣ ಭಾಗಗಳಲ್ಲಿಯೂ ಕೊರೋನಾ ನಿಯಂತ್ರಣಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ. ಇದೀಗ ನೆರೆಯ ರಾಷ್ಟ್ರಗಳ ಜೊತೆಗೆ ಪರಸ್ಪರ ಸಹಕಾರ ಮನೋಭಾವದ ಜೊತೆಗೆ ಕೊರೋನಾ ವಿರುದ್ಧ ಹೋರಾಟ ನಡೆಸಲು ರಾಜ್ಯ ಸರ್ಕಾರ ಅಗತ್ಯ ಕ್ರಮ ಕೈಗೊಂಡಿದೆ ಎಂದು ತಿಳಿಸಿದ್ದಾರೆ. ಇದಕ್ಕೆ ನೆರೆ ರಾಷ್ಟ್ರಗಳಿಂದಲೂ ಸಕಾರಾತ್ಮಕ ಪ್ರತಿಕ್ರಿಯೆ ಬಂದಿದೆ ಎಂದು ಅವರು ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.