ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಆರ್ಭಟ ಜೋರಾಗಿದೆ. ಈ ಹಿನ್ನೆಲೆಯಲ್ಲಿ ಸೋಂಕಿತರ ಚಿಕಿತ್ಸೆಗೆ ಅಗತ್ಯವಾದ ಆಕ್ಸಿಜನ್ ಅನ್ನು ಕೇಂದ್ರ ಸರ್ಕಾರ ರಾಜ್ಯಕ್ಕೆ ಆಕ್ಸಿಜನ್ ಎಕ್ಸ್ಪ್ರೆಸ್ ಮೂಲಕ ನಾಲ್ಕನೇ ಬಾರಿಗೆ ಕಳುಹಿಸಿ ಕೊಟ್ಟಿದೆ.
ಇಂದು ಬೆಂಗಳೂರಿಗೆ ನಾಲ್ಕನೇ ಬಾರಿಗೆ ಕೇಂದ್ರ ಸರ್ಕಾರ ಆಕ್ಸಿಜನ್ ಎಕ್ಸ್ಪ್ರೆಸ್ ಮೂಲಕ 120 ಟನ್ ಆಕ್ಸಿಜನ್ ಪೂರೈಕೆ ಮಾಡಿದೆ. ಆ ಮೂಲಕ ರಾಜ್ಯಕ್ಕೆ ಈ ವರೆಗೆ ಒಟ್ಟು ಮೆಟ್ರಿಕ್ 480 ಟನ್ ಲಿಕ್ವಿಡ್ ಆಕ್ಸಿಜನ್ ಅನ್ನು ಕೇಂದ್ರ ಸರ್ಕಾರ ಒದಗಿಸಿದೆ.
ಒಟ್ಟಿನಲ್ಲಿ ರಾಜ್ಯದ ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನೀಡಲು ಅಗತ್ಯ ಆಕ್ಸಿಜನ್ ಇಲ್ಲದೆ ಸರ್ಕಾರ ಹೆಚ್ಚುವರಿ ಆಕ್ಸಿಜನ್ ಒದಗಿಸಲು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತ್ತು. ಅದರಂತೆ ಇದೀಗ ನಾಲ್ಕು ಹಂತಗಳಲ್ಲಿ ಕೇಂದ್ರ ಸರ್ಕಾರ ರಾಜ್ಯಕ್ಕೆ ಅಗತ್ಯ ಮೆಡಿಕಲ್ ಆಕ್ಸಿಜನ್ ಪೂರೈಸುವ ಮೂಲಕ ಕೊರೋನಾ ವಿರುದ್ಧ ಹೋರಾಟಕ್ಕೆ ಅಗತ್ಯ ನೆರವು ಒದಗಿಸುತ್ತಿದೆ.
Fourth #OxygenExpress to Karnataka, has arrived at Whitefield, Bengaluru with 120 T LMO from Tatanagar.
The Liquid Medical Oxygen delivered by Oxygen Express will provide respite to Covid-19 patients. pic.twitter.com/OmbtptjrXu
— Ministry of Railways (@RailMinIndia) May 18, 2021
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.