ಕುಂದಾಪುರ: ಮರವಂತೆಯಲ್ಲಿ ಕಡಲ ಕೊರೆತದಿಂದ ಹಾನಿಯಾದ ಪ್ರದೇಶಕ್ಕೆ ಸಚಿವ ಆರ್. ಅಶೋಕ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕಡಲ್ಕೊರೆತದಿಂದಾದ ಹಾನಿಗೊಳಗಾಗಿರುವ ಸಂತ್ರಸ್ತರಿಗೆ ತಕ್ಷಣವೇ ತುರ್ತು ಪರಿಹಾರ ಒದಗಿಸಿಕೊಡುವಂತೆಯೂ ಅವರು ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದಾರೆ. ಸಂಪೂರ್ಣ ಹಾನಿಗೊಳಗಾಗಿರುವ ಮನೆಗಳಿಗೆ 1 ಲಕ್ಷ ರೂ. ಗಳನ್ನು ಪರಿಹಾರವಾಗಿ ಒದಗಿಸುವಂತೆಯೂ ಸಚಿವರು ಸೂಚಿಸಿದ್ದಾರೆ.
ಈ ಸಂದರ್ಭದಲ್ಲಿ ಕೊರೋನಾ ಕುರಿತಾಗಿ ಮಾತನಾಡಿದ ಅವರು, ಲಾಕ್ಡೌನ್ ಹೇರಿಕೆಯಿಂದಾಗಿ ಕೊರೋನಾ ಸಕ್ರಿಯ ಪ್ರಕರಣಗಳ ಸಂಖ್ಯೆ ಇಳಿಮುಖವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಲಾಕ್ಡೌನ್ ಅನ್ನು ಮತ್ತಷ್ಟು. ಮುಂದುವರಿಸುವಂತೆ ತಜ್ಞರು ಸೂಚಿಸಿದ್ದು, ಪರಿಸ್ಥಿತಿಗನುಗುಣವಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.