ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಕೊರೋನಾ ಸೋಂಕಿನ ಅಬ್ಬರ ಹೆಚ್ಚಾಗಿದ್ದು, ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮತ್ತು 17 ಜಿಲ್ಲೆಗಳ ಜಿಲ್ಲಾಧಿಕಾರಿಗಳ ಜೊತೆಗೆ ವಿಡಿಯೋ ಸಂವಾದ ನಡೆಸಿದ್ದಾರೆ.
ಉತ್ತರ ಕನ್ನಡ, ಹಾಸನ, ಬಳ್ಳಾರಿ, ಮೈಸೂರು, ತುಮಕೂರು, ಕೋಲಾರ, ಕೊಡಗು, ಬೆಂಗಳೂರು ನಗರ, ಉಡುಪಿ, ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಧಾರವಾಡ, ದಕ್ಷಿಣ ಕನ್ನಡ, ರಾಯಚೂರು, ಕಲ್ಬುರ್ಗಿ, ಮಂಡ್ಯ, ಚಿಕ್ಕಬಳ್ಳಾಪುರ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಉಸ್ತುವಾರಿ ಸಚಿವರುಗಳು ಈ ಸಂವಾದದಲ್ಲಿ ಭಾಗವಹಿಸಿದ್ದಾರೆ.
ಎಲ್ಲಾ ಜಿಲ್ಲೆಗಳಲ್ಲಿನ ಕೊರೋನಾ ಸ್ಥಿತಿಗತಿ, ನಿರ್ವಹಣೆಯ ಕುರಿತಂತೆ ಈ ಸಂದರ್ಭದಲ್ಲಿ ಪ್ರಧಾನಿ ಮೋದಿ ಅವರಿಗೆ ಮಾಹಿತಿ ನೀಡಲಾಗಿದೆ. ಕೊರೋನಾ ನಿಯಂತ್ರಣ ಹಿನ್ನೆಲೆಯಲ್ಲಿ ತೆಗೆದುಕೊಂಡಿರುವ ಕ್ರಮಗಳು, ಔಷಧಗಳು, ಲಸಿಕೆ ವಿತರಣೆ, ಸೋಂಕಿತರ ಚಿಕಿತ್ಸೆ ಮೊದಲಾದ ವಿಚಾರಗಳ ಬಗ್ಗೆ ಮೋದಿ ಅವರಿಗೆ ವಸ್ತು ಸ್ಥಿತಿ ವರದಿ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.