ಶಿವಮೊಗ್ಗ: ಕೋವಿಡ್ ಸಾಂಕ್ರಾಮಿಕದಿಂದ ಎಲ್ಲೆಡೆ ಜನ ಸಾಮಾನ್ಯರು ತೊಂದರೆಗೀಡಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಭದ್ರಾವತಿಯ ಭಜರಂಗ ದಳದ ಕಾರ್ಯ ಸಾರ್ವಜನಿಕರ ಮೆಚ್ಚುಗೆಗೆ ಪಾತ್ರವಾಗಿದೆ.
ಕೋವಿಡ್ನಿಂದಾಗಿ ಮೃತರಾದವರ ದೇಹಗಳನ್ನು ಶಿವಮೊಗ್ಗದಿಂದ ಭದ್ರಾವತಿಗೆ ಸಾಗಿಸಲು ಖಾಸಗಿ ಸಂಸ್ಥೆಗಳು ರೂ. 10000 ದಿಂದ ರೂ. 12000 ತನಕ ಪಡೆಯುತ್ತಿದ್ದ ಹಿನ್ನೆಲೆಯಲ್ಲಿ ಕುಟುಂಬಸ್ಥರು ಸಂಕಷ್ಟ ಅನುಭವಿಸುವಂತಾಗಿತ್ತು. ಈ ಸಮಸ್ಯೆಯನ್ನು ಮನಗಂಡ ಭಜರಂಗ ದಳ ಭದ್ರಾವತಿಯ ಕಾರ್ಯಕರ್ತರು ಅಂತಹ ಮೃತದೇಹಗಳಿಗೆ ವಾಹನ ವ್ಯವಸ್ಥೆ ಮಾಡಿದ್ದಾರೆ. ಅದಾಗಲೇ ಹಲವು ಜನರು ಈ ಸೇವೆಯ ಪ್ರಯೋಜನ ಪಡೆದಿದ್ದು, ಅವರ ಈ ಕಾರ್ಯಕ್ಕೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಭಜರಂಗ ದಳದ ಜಿಲ್ಲಾ ಪ್ರಮುಖ ಸುನಿಲ್ ಕುಮಾರ್(9483418284), ವಡಿವೇಲು (7019788485), ಶಿವಶಂಕರ್, ಅರಳಿಹಳ್ಳಿ ದೇವರಾಜ್(9632319555), ಕೃಷ್ಣ, ಶ್ರೀಕಾಂತ್, ಅಜಿತ್, ಕಿರಣ್, ಮಣಿಕಂಠ, ರಮೇಶ್, ಸವಾಯ್ ಸಿಂಗ್, ರಂಗನಾಥ್ ಮತ್ತು ಭರತ್ ಸೇರಿದಂತೆ ಹಲವು ಕಾರ್ಯಕರ್ತರು ಈ ಸಮಾಜಮುಖಿ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.