ಬೆಂಗಳೂರು: ಕೊರೋನಾ ಸೋಂಕಿನಿಂದ ಕರುನಾಡು ಕಂಗೆಟ್ಟಿರುವಾಗಲೇ ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ಸೋಂಕು ಸಹ ಆರಂಭವಾಗಿದ್ದು, ಇದಕ್ಕೆ ಉಚಿತ ಚಿಕಿತ್ಸೆ ನೀಡಲಾಗುವುದಾಗಿ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಅವರು ತಿಳಿಸಿದ್ದಾರೆ.
ಈ ಸಂಬಂಧ ಮಾತನಾಡಿರುವ ಅವರು, ಬ್ಲ್ಯಾಕ್ ಫಂಗಸ್ಗೆ ಬೆಂಗಳೂರಿನ ಬೌರಿಂಗ್ ಮತ್ತು ಲೇಡಿ ಕರ್ಸನ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಆರಂಭಿಸಲಾಗಿದೆ. ಮುಂದಿನ ದಿನಗಳಲ್ಲಿ ಈ ಚಿಕಿತ್ಸೆಯನ್ನು ಎಲ್ಲಾ ವೈದ್ಯಕೀಯ ಕಾಲೇಜುಗಳು ಮತ್ತು ಜಿಲ್ಲಾಸ್ಪತ್ರೆಗಳಿಗೆ ವಿಸ್ತರಣೆ ಮಾಡಲಾಗುತ್ತದೆ ಎಂದು ಹೇಳಿದ್ದಾರೆ.
ಈ ಸೋಂಕಿನ ಚಿಕಿತ್ಸೆಯು ಬರೋಬ್ಬರಿ 7 ವಾರಗಳ ವರೆಗೆ ನಡೆಯುತ್ತದೆ. ಈ ಹಿನ್ನೆಲೆಯಲ್ಲಿ ಇದರಿಂದ ಬಾಧಿತರಾದ ಹಲವರಿಗೆ ಈ ಚಿಕಿತ್ಸೆ ದುಬಾರಿಯಾಗಬಹುದು. ಆದ್ದರಿಂದ ಸಾರ್ವಜನಿಕರ ಅನುಕೂಲಕ್ಕಾಗಿ ಈ ಸಂಬಂಧ ಮುಖ್ಯಮಂತ್ರಿ ಯಡಿಯೂರಪ್ಪ ಜೊತೆಗೆ ಚರ್ಚಿಸಿ ಈ ನಿರ್ಧಾರ ತೆಗೆದುಕೊಂಡಿರುವುದಾಗಿ ಸಚಿವ ಸುಧಾಕರ್ ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.