ಬೆಂಗಳೂರು: ಮಳೆಗಾಲದ ಸಂದರ್ಭದಲ್ಲಿ ನದಿಗಳಲ್ಲಿ ಮರಳುಗಾರಿಕೆಗೆ ಅವಕಾಶ ಇಲ್ಲ. ಈ ಅಂಶ ಪರಿಸರ ಮತ್ತು ಅರಣ್ಯ ಸಚಿವಾಲಯಗಳ ಮಾರ್ಗಸೂಚಿಯಲ್ಲಿದೆ ಎಂದು ಹೈಕೋರ್ಟ್ ತಿಳಿಸಿದೆ.
2020 ರ ಜೂನ್ ಸಂದರ್ಭದಲ್ಲಿ ಚಾಮರಾಜನಗರದಲ್ಲಿ ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ಉಪನಿರ್ದೇಶಕರು ಹೊರಡಿಸಿದ ಆದೇಶದ ಸಂಬಂಧ ಸಲ್ಲಿಸಲಾದ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎ ಎಸ್ ಒಕಾ ನೇತೃತ್ವದ ವಿಭಾಗೀಯ ಪೀಠ ನಡೆಸಿದ್ದು, ಈ ಆದೇಶವನ್ನು ಹೊರಡಿಸಿದೆ.
ಈ ಅರ್ಜಿಯಲ್ಲಿ 2017 ರಲ್ಲಿಯೇ ಮರಳು ಗಣಿಗಾರಿಕೆಗೆ 5 ವರ್ಷಗಳ ಅವಧಿಗೆ ಅನುಮತಿ ನೀಡಲಾಗಿದೆ. ಆದರೆ ಮಳೆಗಾಲದಲ್ಲಿ ಮರಳು ಗಣಿಗಾರಿಕೆ ನಡೆಸಲು ಅನುಮತಿ ಇಲ್ಲ. ಆದರೆ ಗುತ್ತಿಗೆಯ ಕರಾರಿನಲ್ಲಿ ಈ ನಿರ್ಬಂಧದ ಬಗ್ಗೆ ಉಲ್ಲೇಖಿಸಿಲ್ಲ. ರಾಜ್ಯದಲ್ಲೂ ಈ ಸಂಬಂಧ ನಿಯಮಾವಳಿಗಳು ಇಲ್ಲ ಎಂದು ಅರ್ಜಿದಾರರು ತಿಳಿಸಿದ್ದರು.
ಇದಕ್ಕೆ ಉತ್ತರಿಸಿರುವ ಹೈಕೋರ್ಟ್, ಪರಿಸರ ಮತ್ತು ಅರಣ್ಯ ಸಚಿವಾಲಯ ಹೊರಡಿಸಿರುವ ಮಾರ್ಗಸೂಚಿಗಳ 10 ನೇ ಷರತ್ತಿನ ಅನ್ವಯ ಮಳೆಗಾಲದಲ್ಲಿ ಮರಳುಗಾರಿಕೆಗೆ ಅವಕಾಶ ನೀಡಬಾರದು ಎಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ರಾಜ್ಯದಲ್ಲಿ ಜೂನ್ 5 ರಿಂದ ಅಕ್ಟೋಬರ್ 15 ರ ವರೆಗೆ ನದಿಗಳಲ್ಲಿ ಮರಳು ತೆಗೆಯಲು ಅವಕಾಶ ನೀಡಬಾರದು ಎಂದು ಪೀಠ ತಿಳಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.