ಬೆಂಗಳೂರು: ಕೊರೋನಾ ಸಂಕಷ್ಟದ ಸಂದರ್ಭದಲ್ಲಿ ಜೀವ ರಕ್ಷಕಗಳಾಗಿ ಪರಿಗಣಿತವಾಗಿರುವ ಔಷಧಗಳ ಕಾಳಸಂತೆ ಅಕ್ರಮ ಮಾರಾಟ ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ಸೂಚನೆ ನೀಡಿದೆ.
ರೆಮ್ಡೆಸಿವಿರ್ ಅಕ್ರಮ ಮಾರಾಟಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ ಸೊಹೈಲ್ ಪಾಷಾ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದ ನೇತೃತ್ವದ ಪೀಠ, ಕೊರೋನಾ ಸಂದರ್ಭದಲ್ಲಿ ಜೀವ ಉಳಿಸಿಕೊಳ್ಳಲು ಜನರು ಪರದಾಡುತ್ತಿದ್ದಾರೆ. ಇಂತಹ ಸಮಯದಲ್ಲಿಯೂ ಲಾಭ ಪಡೆಯುವ ಉದ್ದೇಶದಿಂದ ಔಷಧಗಳನ್ನು ಕಾಳಸಂತೆಯಲ್ಲಿ ಮಾರಾಟ ಮಾಡಿರುವ ಆರೋಪ ಅರ್ಜಿದಾರರ ವಿರುದ್ಧ ಇದೆ. ಕೊರೋನಾ ಸೋಂಕಿತರ ಬದುಕಿನ ಜೊತೆಗೆ ಚೆಲ್ಲಾಟ ಆಡುವುದು ಆಘಾತ ಮತ್ತು ಆತಂಕಕಾರಿಯೇ ಸರಿ ಎಂದು ತಿಳಿಸಿದೆ.
ಈತನಿಗೆ ಚುಚ್ಚುಮದ್ದು ದೊರಕಿದ್ದು ಎಲ್ಲಿ ಎಂಬ ಬಗ್ಗೆ ತನಿಖೆಯಾಗಬೇಕು. ಈ ವಿಚಾರದಲ್ಲಿ ತನಿಖೆ ನಡೆಸುತ್ತಿರುವ ಅಧಿಕಾರಿಗಳ ಕಾರ್ಯ ಶ್ಲಾಘನೀಯ. ಈ ಸಂಬಂಧ ಇನ್ನೂ ಹೆಚ್ಚಿನ ತನಿಖೆ ನಡೆಯಬೇಕಿದ್ದು, ಈ ದಂಧೆಯನ್ನು ಸಂಪೂರ್ಣ ಮಟ್ಟ ಹಾಕುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಬೇಕು ಎಂದು ಕೋರ್ಟ್ ಸೂಚಿಸಿದೆ.
ಹಾಗೆಯೇ ಆರೋಪಿಗೆ ಜಾಮೀನು ನಿರಾಕರಿಸಿ ಆದೇಶ ನೀಡಿದೆ. ತನಿಖೆಯ ಅಂತಿಮ ವರದಿಯ ಬಳಿಕ ಜಾಮೀನಿನ ಬಗ್ಗೆ ಚಿಂತಿಸಿ ಎಂದು ಸೂಚಿಸಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.