News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಹೆಚ್ಚಿನ ಕಂಪನಿಗಳಿಗೆ ಲಸಿಕೆ ಉತ್ಪಾದನೆಯ ಪರವಾನಗಿ ನೀಡುವಂತೆ ಗಡ್ಕರಿ ಸಲಹೆ

ನವದೆಹಲಿ: ದೇಶದಲ್ಲಿ ಕೋವಿಡ್ ಲಸಿಕೆಗಳಿಗೆ ಭಾರಿ ಬೇಡಿಕೆ ಇರುವುದರಿಂದ ಹೆಚ್ಚಿನ ಕಂಪನಿಗಳಿಗೆ ಅವುಗಳನ್ನು ತಯಾರಿಸಲು ಪರವಾನಗಿ ನೀಡಬೇಕು ಎಂದು ಕೇಂದ್ರ ಸಚಿವ ನಿತಿನ್ ಗಡ್ಕರಿ ಸಲಹೆ ನೀಡಿದಾರೆ.

ರಾಸಾಯನಿಕ ಮತ್ತು ರಸಗೊಬ್ಬರಗಳ ರಾಜ್ಯ ಸಚಿವ ಮನ್ಸುಖ್ ಮಾಂಡವಿಯಾ ಮತ್ತು ಹಲವಾರು ವಿಶ್ವವಿದ್ಯಾಲಯಗಳ ಉಪಕುಲಪತಿಗಳ ಉಪಸ್ಥಿತಿಯಲ್ಲಿ ನಡೆದ ವರ್ಚುವಲ್ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಗಡ್ಕರಿ, ಲಸಿಕೆ ಉತ್ಪಾದನೆಯನ್ನು ಹೆಚ್ಚಿಸಲು ಇನ್ನೂ 10 ಕಂಪನಿಗಳಿಗೆ ಲಸಿಕೆಗಳನ್ನು ತಯಾರಿಸಲು ಪರವಾನಗಿ ನೀಡಬಹುದಾಗಿದೆ ಎಂದು ಹೇಳಿದರು.

ಭವಿಷ್ಯದಲ್ಲಿ ಉತ್ಪಾದನೆಯು ಹೆಚ್ಚುವರಿ ಆದರೆ, ಲಸಿಕೆಗಳನ್ನು ಅಗತ್ಯವಿರುವ ದೇಶಗಳಿಗೆ ರಫ್ತು ಮಾಡಬಹುದು ಎಂದು ಅವರು ಹೇಳಿದ್ದಾರೆ.

ದೇಶದ ಪ್ರತಿ ರಾಜ್ಯದ ಕನಿಷ್ಠ ಎರಡು ಮೂರು ಪ್ರಯೋಗಾಲಯಗಳು ಲಸಿಕೆಗಳನ್ನು ತಯಾರಿಸಲು ಮೂಲಸೌಕರ್ಯಗಳನ್ನು ಹೊಂದಿವೆ ಎಂಬ ಅಂಶವನ್ನು ಎತ್ತಿ ತೋರಿಸಿದ ಗಡ್ಕರಿ, ವ್ಯಾಪಾರ ಆಧಾರಿತ ಮಾದರಿಯಲ್ಲಿ ಉತ್ಪಾದನೆಯನ್ನು ಹೆಚ್ಚಿಸಲು ಮೂಲ ತಯಾರಕರು ಶೇಕಡಾ 10 ರಷ್ಟು ರಾಯಲ್ಟಿಯನ್ನು ಹೊಂದಬಹುದು ಎಂದು  ಸಲಹೆ ನೀಡಿದರು.

ಇಂತಹ ಮಾದರಿಯು ಕೇವಲ 15 ರಿಂದ 20 ದಿನಗಳಲ್ಲಿ ದೇಶದಲ್ಲಿ ಲಸಿಕೆ ಬೇಡಿಕೆಯನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ ಎಂದು ಅವರು ದೃಢವಾಗಿ ಹೇಳಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top