ನವದೆಹಲಿ: ಕೋವಿಡ್-19 ಲಸಿಕೆ ತಯಾರಿಕೆಗಾಗಿ ಯುಎಸ್ ಔಷಧೀಯ ಕಂಪನಿ ಜಾನ್ಸನ್ ಆ್ಯಂಡ್ ಜಾನ್ಸನ್ ತೆಲಂಗಾಣ ಮೂಲದ ಬಯೋಲಾಜಿಕಲ್ ಇ ಲಿಮಿಟೆಡ್ ಜೊತೆ ಕೈಜೋಡಿಸಿದೆ.
ಜಾನ್ಸನ್ ಆ್ಯಂಡ್ ಜಾನ್ಸನ್ ಕಂಪನಿಯ ಜಾನ್ಸೆನ್ ಕೋವಿಡ್ -19 ಎಂಬ ಲಸಿಕೆಯನ್ನು ಪ್ರಸ್ತುತ ಯುಎಸ್, ಯುರೋಪ್ ಮತ್ತು ಥೈಲ್ಯಾಂಡ್ ಮತ್ತು ದಕ್ಷಿಣ ಆಫ್ರಿಕಾ ಸೇರಿದಂತೆ ಇತರ ರಾಷ್ಟ್ರಗಳಲ್ಲಿ ಅನುಮೋದಿಸಲಾಗಿದೆ.
ಕೋವಿಡ್ -19 ಲಸಿಕೆ ತಯಾರಿಕೆಗೆ ಸಂಬಂಧಿಸಿದಂತೆ ಬಯೋಲಾಜಿಕಲ್ ಇ. ಲಿಮಿಟೆಡ್ನ ಜೊತೆ ಸೇರಿ ನಮ್ಮ ಸಂಸ್ಥೆ ಕಾರ್ಯನಿರ್ವಹಿಸುತ್ತಿದೆ ಎಂದು ಜಾನ್ಸನ್ ಆ್ಯಂಡ್ ಜಾನ್ಸನ್ ಮಾಧ್ಯಮ ಹೇಳಿಕೆಯಲ್ಲಿ ತಿಳಿಸಿದೆ.
ಕೋವಿಡ್-19 ಲಸಿಕೆಗಳನ್ನು ವಿಶ್ವಾದ್ಯಂತ ಪೂರೈಸಲು ಉತ್ಪಾದನಾ ಸಾಮರ್ಥ್ಯಗಳನ್ನು ಅಭಿವೃದ್ಧಿಪಡಿಸಲು ಮತ್ತು ವಿಶಾಲವಾಗಿ ಸಕ್ರಿಯಗೊಳಿಸಲು ಕಂಪನಿಯು ಅವಿರತವಾಗಿ ಶ್ರಮಿಸುತ್ತಿದೆ ಎಂದು ಅದು ಹೇಳಿದೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.