News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಅಸ್ಸಾಂ: ಮದರಸವನ್ನು ಸಾಮಾನ್ಯ ಶಾಲೆಗಳಾಗಿ ಪರಿವರ್ತಿಸುವ ಪ್ರಕ್ರಿಯೆ ಶೀಘ್ರ ಆರಂಭ

ನವದೆಹಲಿ: ಮದರಸವನ್ನು ಸಾಮಾನ್ಯ ಶಾಲೆಗಳಾಗಿ ಪರಿವರ್ತಿಸುವ ಪ್ರಕ್ರಿಯೆಯನ್ನು ತಕ್ಷಣದಿಂದ ಪ್ರಾರಂಭಿಸಲು ಅಧಿಕಾರಿಗಳಿಗೆ  ಅಸ್ಸಾಂನ ನೂತನ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ ನಿರ್ದೇಶನ ನೀಡಿದ್ದಾರೆ. ಹಿಂದಿನ ಸರ್ಬಾನಂದ ಸೋನೊವಾಲ್ ನೇತೃತ್ವದ ಸರ್ಕಾರದ ನಿರ್ಧಾರವನ್ನು ಅವರು ಜಾರಿಗೆ ತರುತ್ತಿದ್ದಾರೆ.

ಶಿಕ್ಷಣ ಸಚಿವ ರಾನೋಜ್ ಪೆಗು ಮತ್ತು ಹಣಕಾಸು ಸಚಿವ ಅಜಂತಾ ನಿಯೋಗ್ ಅವರ ಸಮ್ಮುಖದಲ್ಲಿ ಶಿಕ್ಷಣ ಇಲಾಖೆಯ ಕಾರ್ಯವೈಖರಿಯ ಬಗ್ಗೆ ಸಮಗ್ರ ಪರಿಶೀಲನೆ ನಡೆಸಿದ ಸಂದರ್ಭ,  ಮದರಸಾವನ್ನು ಸಾಮಾನ್ಯ ಶಾಲೆಗಳಾಗಿ ಪರಿವರ್ತಿಸುವ ಪ್ರಕ್ರಿಯೆಯನ್ನು ತಕ್ಷಣದಿಂದ ಪ್ರಾರಂಭಿಸಲು  ನಿರ್ದೇಶನ ನೀಡಿದ್ದಾರೆ ಎನ್ನಲಾಗಿದೆ.

ಪ್ರಾಂತೀಯ ಮತ್ತು ಸರ್ಕಾರಿ ಶಾಲೆಗಳಲ್ಲಿ ಆದ್ಯತೆಯ ಆಧಾರದ ಮೇಲೆ ಶಿಕ್ಷಕರ ನೇಮಕಾತಿಯನ್ನು ಖಚಿತಪಡಿಸಿಕೊಳ್ಳಲು ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

2020 ರ ಡಿಸೆಂಬರ್‌ನಲ್ಲಿ, ಪ್ರತಿಪಕ್ಷದ ಶಾಸಕರ ಪ್ರತಿಭಟನೆಯ ಮಧ್ಯೆ, ಅಸ್ಸಾಂ ಅಸೆಂಬ್ಲಿ ಅಸ್ಸಾಂ ರಿಪೀಲಿಂಗ್ ಮಸೂದೆ 2020 ಅನ್ನು ಅಂಗೀಕರಿಸಿತು, ಇದು ಅಸ್ಸಾಂ ಮದರಸಾ ಶಿಕ್ಷಣ (ಪ್ರಾಂತೀಯೀಕರಣ) ಕಾಯ್ದೆ, 1995 ಮತ್ತು ಅಸ್ಸಾಂ ಮದರಸಾ ಶಿಕ್ಷಣ (ನೌಕರರ ಸೇವೆಗಳ ಪ್ರಾಂತೀಕರಣ ಮತ್ತು ಮದರಸಾ ಮರು ಸಂಘಟನೆ ಶಿಕ್ಷಣ ಸಂಸ್ಥೆಗಳು) ಕಾಯ್ದೆ, 2018 ಅನ್ನು ತೆಗೆದು ಹಾಕಿದೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top