ಬೆಂಗಳೂರು: ನಗರದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಆವರಣದಲ್ಲಿ ನಿರ್ಮಾಣವಾಗಿರುವ ಕೊರೋನಾ ಕೇರ್ ಸೆಂಟರ್ ಅನ್ನು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಲೋಕಾರ್ಪಣೆ ಮಾಡಿದ್ದು, ಇಲ್ಲಿ ಸಾರ್ವಜನಿಕರಿಗೂ ಚಿಕಿತ್ಸೆ ನೀಡಲಾಗುತ್ತದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿದ್ದಾರೆ.
150 ಹಾಸಿಗೆಗಳನ್ನು ಒಳಗೊಂಡ ಈ ಸುಸಜ್ಜಿತ ಕೇರ್ ಸೆಂಟರ್ನಲ್ಲಿ ಕೇವಲ ವಿಮಾನ ನಿಲ್ದಾಣ ಸಿಬ್ಬಂದಿಗೆ ಮಾತ್ರವೇ ಚಿಕಿತ್ಸೆ ನೀಡಲು ಆರಂಭದಲ್ಲಿ ನಿರ್ಧರಿಸಲಾಗಿತ್ತಾದರೂ, ಆ ಬಳಿಕ ಇಲ್ಲಿ ಸಾರ್ವಜನಿಕರಿಗೂ ಚಿಕಿತ್ಸೆ ನೀಡುವ ಸಲುವಾಗಿ ನಿರ್ಧರಿಸಲಾಗಿದೆ. ವಿಮಾನ ನಿಲ್ದಾಣದ ಸೋಂಕಿತ ಸಿಬ್ಬಂದಿಗಳ ಜೊತೆಗೆ ಲಕ್ಷಣ ರಹಿತ ಸೋಂಕಿನಿಂದ ಬಳಲುತ್ತಿರುವ ಸಾರ್ವಜನಿಕರಿಗೆ ಚಿಕಿತ್ಸೆ ನೀಡಲಾಗುತ್ತದೆ ಎಂದು ಅಧಿಕಾರಿಗಳು ಹೇಳಿದ್ದಾರೆ.
ಹಾಗೆಯೇ ಉಸಿರಾಟದ ಸಮಸ್ಯೆ ಎದುರಿಸುತ್ತಿರುವ ಸೋಂಕಿತರಿಗೆ ಆಸ್ಪತ್ರೆಗಳಲ್ಲಿ ಹಾಸಿಗೆಗಳು ಸಿಗುವ ವರೆಗೂ ಈ ಕೇಂದ್ರಗಳಲ್ಲಿ ಚಿಕಿತ್ಸೆ ಪಡೆಯಬಹುದಾಗಿದೆ. ಆದರೆ ಮೆಡಿಸಿನ್ಗಳು, ಪರೀಕ್ಷೆ ಮತ್ತು ಆಂಬ್ಯುಲೆನ್ಸ್ ವೆಚ್ಚಗಳನ್ನು ಸೋಂಕಿತರೇ ಭರಿಸಬೇಕಾಗುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.