ಬೆಂಗಳೂರು: ಕೊರೋನಾ ಸಾಂಕ್ರಾಮಿಕ ರಾಜ್ಯದಲ್ಲಿ ದಿನೇ ದಿನೇ ಏರಿಕೆಯಾಗುತ್ತಲೇ ಇದೆ. ಈ ಹಿನ್ನೆಲೆಯಲ್ಲಿ ತತ್ತರಿಸಿರುವ ಕರ್ನಾಟಕಕ್ಕೆ ಐಐಟಿ ಕಾನ್ಪುರ ಮಾದರಿಯಲ್ಲಿ ಸೂತ್ರ ಪಾಲಿಸುವಂತೆ ರಾಷ್ಟ್ರೀಯ ತಜ್ಞರು ಸಲಹೆ ನೀಡಿದ್ದಾರೆ.
ಈ ಸಂಬಂಧ ರಾಜ್ಯದ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರೊಂದಿಗೆ ಕೇಂದ್ರ ಸರ್ಕಾರದ ಮುಖ್ಯ ಆರ್ಥಿಕ ಸಲಹೆಗಾರ ಕೃಷ್ಣಮೂರ್ತಿ ಸುಬ್ರಮಣಿಯನ್ ಅವನು ವರ್ಚುವಲ್ ಮೂಲಕ ಸಭೆ ನಡೆಸಿದ್ದು, ಈ ಸಂದರ್ಭದಲ್ಲಿ ಐಐಟಿ ಕಾನ್ಪುರ ಮಾದರಿಯನ್ನು ವಿವರಿಸಿದ್ದಾರೆ. ಈ ಸೂತ್ರ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ತೀವ್ರ ಸ್ವರೂಪ ಪಡೆದಿರುವ ಕೊರೋನಾ ಸೋಂಕು ನಿಯಂತ್ರಣ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ಕೆಲಸ ಮಾಡಲಿದೆ ಎಂದು ಅವರು ಹೇಳಿದ್ದಾರೆ.
ಹಾಗೆಯೇ ರಾಜ್ಯದ ಕೊರೋನಾ ಪರಿಸ್ಥಿತಿ ಬಗ್ಗೆ ತಾವು ಕೂಲಂಕಷವಾಗಿ ಅಧ್ಯಯನ ನಡೆಸಿರುವುದಾಗಿ ತಿಳಿಸಿರುವ ಕೃಷ್ಣಮೂರ್ತಿ, ರಾಜ್ಯದ ಉತ್ತರ ಭಾಗಗಳ ಗ್ರಾಮೀಣ ಪ್ರದೇಶಗಳ ಬಗ್ಗೆ ಹೆಚ್ಚು ಮಾಹಿತಿ ಪಡೆದುಕೊಂಡಿದ್ದಾಗಿ ತಿಳಿಸಿದ್ದಾರೆ. ಹಾಗೆಯೇ ಕೊರೋನಾ ನಿಯಂತ್ರಣ, ಸೋಂಕಿತರ ಚಿಕಿತ್ಸೆ ಹಿನ್ನೆಲೆಯಲ್ಲಿ ರಾಜ್ಯ ಕೈಗೊಂಡ ಕ್ರಮಗಳ ಸಂಬಂಧವೂ ಈ ವೇಳೆ ಮುಖ್ಯಮಂತ್ರಿಗಳ ಜೊತೆಗೆ ಅವರು ಮಾತುಕತೆ ನಡೆಸಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.