ಬೆಂಗಳೂರು: ಕೊರೋನಾ ನಿರ್ವಹಣೆ ಹಿನ್ನೆಲೆಯಲ್ಲಿ ರಾಜ್ಯದ ಪ್ರತಿ ಗ್ರಾಮ ಪಂಚಾಯತ್ಗೆ 50 ಸಾವಿರ ರೂ. ಮುಂಗಡ ನೀಡಲು ಮುಖ್ಯಮಂತ್ರಿ ಯಡಿಯೂರಪ್ಪ ನಿರ್ಧರಿಸಿದ್ದಾರೆ ಎಂದು ಸಚಿವ ಡಾ ಕೆ ಸುಧಾಕರ್ ತಿಳಿಸಿದ್ದಾರೆ.
ಈ ಮೊತ್ತವು ಹಳ್ಳಿಗಳಲ್ಲಿ ಸೋಂಕಿತರ ಮನೆ ಭೇಟಿ ಮಾಡಿ ಅವರನ್ನು ಕೊರೋನಾ ಕೇರ್ ಸೆಂಟರ್ಗೆ ಚಿಕಿತ್ಸೆಗೆ ದಾಖಲಿಸುವುದಕ್ಕೆ ಕಾರ್ಯಪಡೆಗೆ ಅನುಕೂಲ ಒದಗಿಸಲಿದೆ ಎಂದು ಸಚಿವರು ಹೇಳಿದ್ದಾರೆ. ಹಾಗೆಯೇ ಕೊರೋನಾ ಪೀಡಿತರ ಸಂಖ್ಯೆ ಹೆಚ್ಚಾಗಿರುವ ಪ್ರದೇಶಗಳಿಗೆ ತಲಾ 25 ರಂತೆ ಆಮ್ಲಜನಕ ಸಾಂಧ್ರಕಗಳನ್ನು ಕಳುಹಿಸಿ ಕೊಡುವ ಮೂಲಕವೂ ಸೋಂಕಿತರ ಚಿಕಿತ್ಸೆಗೆ ಅಗತ್ಯ ಅನುಕೂಲ ಒದಗಿಸಲಾಗುವುದು ಎಂದು ಸಚಿವರು ಹೇಳಿದ್ದಾರೆ.
ರಾಜ್ಯದ ಎಲ್ಲಾ ವೈದ್ಯಕೀಯ ಕಾಲೇಜುಗಳಲ್ಲಿ ಕೊರೋನಾ ಚಿಕಿತ್ಸೆಗೆ ಐಸಿಯು, ಆಮ್ಲಜನಕ ಪೂರೈಕೆ ಸೇರಿದಂತೆ ಅಗತ್ಯ ಮೂಲಸೌಕರ್ಯ ಒದಗಿಸಲು ಉದ್ದೇಶಿಸಲಾಗಿದೆ. ಈ ನಿಟ್ಟಿನಲ್ಲಿ ಸರ್ಕಾರ ಕಾರ್ಯಪ್ರವೃತ್ತವಾಗಲಿದೆ ಎಂದು ಹೇಳಿದ್ದಾರೆ. ಹಾಗೆಯೇ ಎಲ್ಲಾ ಜನಪ್ರತಿನಿಧಿಗಳು ಕೊರೋನಾ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳುವಂತೆ ಮನವಿ ಮಾಡಿದ್ದಾರೆ.
ಸರ್ಕಾರ ಕೊರೋನಾ ಸಾವಿನ ಸಂಖ್ಯೆಯನ್ನು ಮರೆಮಾಚುತ್ತಿಲ್ಲ. ರಾಜ್ಯದಲ್ಲಿ ಪರೀಕ್ಷೆ ನಡೆಸಿದ 24 ಗಂಟೆಗಳೊಳಗಾಗಿ ವರದಿ ನೀಡುವಂತೆಯೂ ಆದೇಶಿಸಲಾಗಿದೆ. ಹಾಗೆಯೇ ಬ್ಲ್ಯಾಕ್ ಫಂಗಸ್ ರೋಗಕ್ಕೆ ಔಷಧ ವಿತರಿಸುವ ನಿಟ್ಟಿನಲ್ಲಿಯೂ ಸರ್ಕಾರ ಕ್ರಮ ಕೈಗೊಂಡಿದೆ. ಹೆಚ್ಚಿನ ಪ್ರಮಾಣದಲ್ಲಿ ಔಷಧ ಒದಗಿಸಲು ಕೇಂದ್ರ ಸರ್ಕಾರಕ್ಕೂ ಮನವಿ ಮಾಡಲಾಗಿದೆ ಎಂದು ಸುಧಾಕರ್ ಹೇಳಿದ್ದಾರೆ.
ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.
News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.