News13 ವಾಟ್ಸ್ಯಾಪ್‌ ಗ್ರೂಪ್‌ಗೆ ಸೇರಿ


×
Home About Us Advertise With s Contact Us

ಮಹಾರಾಷ್ಟ್ರ: ಎನ್‌ಕೌಂಟರ್‌ನಲ್ಲಿ 13 ನಕ್ಸಲರ ಹತ್ಯೆ

ಮುಂಬಯಿ: ಗಡ್ಚಿರೋಲಿ ಜಿಲ್ಲೆಯ ಕಾಡುಗಳಲ್ಲಿ ಮಹಾರಾಷ್ಟ್ರ ಪೊಲೀಸರ ಸಿ -60 ಕಮಾಂಡೋಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಕನಿಷ್ಠ 13 ನಕ್ಸಲರು ಸಾವನ್ನಪ್ಪಿದ್ದಾರೆ ಎಂದು ಹಿರಿಯ ಅಧಿಕಾರಿಯೊಬ್ಬರು ಶುಕ್ರವಾರ ಬೆಳಿಗ್ಗೆ ತಿಳಿಸಿದ್ದಾರೆ.

ಬೆಳಿಗ್ಗೆ 5.30 ಕ್ಕೆ ಕೋಟ್ಮಿ ಬಳಿಯ ಅರಣ್ಯ ಪ್ರದೇಶದಲ್ಲಿ ನಕ್ಸಲರು ಸಭೆ ನಡೆಸುವ ಸಲುವಾಗಿ ಜಮಾಯಿಸಿದ್ದರು ಎಂದು ಡಿಐಜಿ (ಗಡ್ಚಿರೋಲಿ) ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

“ನಿರ್ದಿಷ್ಟ ಮಾಹಿತಿ ಆಧಾರದ ಮೇಲೆ, ಸಿ -60 ಕಮಾಂಡೋಗಳನ್ನು ಒಳಗೊಂಡ ಪೊಲೀಸ್ ಪಡೆಯು ಕಾಡಿನಲ್ಲಿ ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು. ಈ ವೇಳೆ ನಕ್ಸಲರು ಪೊಲೀಸರ ಮೇಲೆ ಗುಂಡು ಹಾರಿಸಿದ್ದಾರೆ. ಇದರಿಂದಾಗಿ ಎನ್‌ಕೌಂಟರ್‌ ಆರಂಭವಾಯಿತು” ಎಂದು ಮಾಹಿತಿ ನೀಡಿದ್ದಾರೆ.

ಎನ್‌ಕೌಂಟರ್ ಸುಮಾರು ಒಂದು ಗಂಟೆ ಕಾಲ ನಡೆಯಿತು, 13 ಮಂದಿ ನಕ್ಸಲರು ಸತ್ತಿದ್ದಾರೆ, ಉಳಿದವರು ಕಾಡಿನ ನಡುವೆ ಪರಾರಿಯಾಗಿದ್ದಾರೆ ಎಂದು  ತಿಳಿಸಿದ್ದಾರೆ.

ನಕ್ಸಲರ ಶವಗಳನ್ನು ವಶಪಡಿಸಿಕೊಳ್ಳಲಾಗಿದ್ದು, ಶೋಧ ಕಾರ್ಯಾಚರಣೆ ಮುಂದುವರೆದಿದೆ ಎಂದಿದ್ದಾರೆ.

ನ್ಯೂಸ್ 13 ಸಮಾಜದ ಧನಾತ್ಮಕ ಸುದ್ದಿಗಳನ್ನು ಹಾಗೂ ರಾಷ್ಟ್ರೀಯ ವಿಚಾರಗಳನ್ನು ನಿಮಗೆ ತಲುಪಿಸುವ ಪ್ರಯತ್ನ ಮಾಡುತ್ತದೆ. ಈ ರೀತಿ ಇನ್ನಷ್ಟು ಉತ್ತಮ ಸುದ್ದಿಗಳನ್ನು ತಲುಪಿಸಲು ನಿಮ್ಮ ಸಹಕಾರವನ್ನು ಅಪೇಕ್ಷಿಸುತ್ತಿದ್ದೇವೆ. ಈ ಕಾರ್ಯದಲ್ಲಿ ನೀವೂ ನಮ್ಮೊಂದಿಗೆ ಜೊತೆಯಾಗಿ.

News13 strives to publish and promote positive news/happenings and nationalistic thoughts. Join hands with us in this constructive cause. We hope and expect your co-operation in this objective of broadcasting news that shall keep up with quality journalism.

Recent News

Back To Top